29
September, 2026

A News 365Times Venture

29
Tuesday
September, 2026

A News 365Times Venture

ಜಸ್ಪ್ರೀತ್ ಬುಮ್ರಾ ಮುಡಿಗೆ ICC  2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ

Date:

ನವದೆಹಲಿ,ಜನವರಿ,27,2025 (www.justkannada.in): ಐಸಿಸಿ, 2024 ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ  ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾಜನರಾಗಿದ್ದಾರೆ.

2024 ರಲ್ಲಿ ಜಸ್ಪ್ರೀತ್ ಬುಮ್ರಾ ಅತ್ಯತ್ತಮ ಪ್ರದರ್ಶನ ನೀಡಿದ್ದು ಇದೀಗ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ಜಸ್ಪ್ರೀತ್ ಬುಮ್ರಾ ಅವರು 2024 ರಲ್ಲಿ ಒಟ್ಟು 13 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 14.92 ಸರಾಸರಿಯಲ್ಲಿ 71 ವಿಕೆಟ್ ಪಡೆದರು. ಈ ಮೂಲಕ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಎನಿಸಿಕೊಂಡಿದ್ದರು.

ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನು ಗೆದ್ದ 6ನೇ ಭಾರತೀಯ ಕ್ರಿಕೆಟರ್ ಜಸ್ಪ್ರೀತ್ ಬುಮ್ರಾ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್, ಗೌತಮ್ ಗಂಭೀರ್, ವೀರೇಂದ್ರ ಸೆಹ್ವಾಗ್, ರವಿಚಂದ್ರನ್ ಅಶ್ವಿನ್ ಮತ್ತು ವಿರಾಟ್ ಕೊಹ್ಲಿ ಕೂಡ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆದರೆ ಈ ಐವರು ಆಟಗಾರರು ಬ್ಯಾಟ್ಸ್‌ಮನ್ ​ಗಳಾಗಿದ್ದು, ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾದ ಭಾರತದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ.

Key words: Jasprit Bumrah, ICC,  2024 Test Cricketer of the Year, award

The post ಜಸ್ಪ್ರೀತ್ ಬುಮ್ರಾ ಮುಡಿಗೆ ICC  2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഫലസ്തീന്‍ ആക്ഷന്‍ നിരോധനം ഉചിതമായിരുന്നോയെന്ന് പരിശോധിക്കും: യു.കെ വിദേശകാര്യ സെക്രട്ടറി

ലിവര്‍പൂള്‍: ഫലസ്തീന്‍ ആക്ഷന്‍ സംഘടനയെ ഭീകരവാദ സംഘടനയായി പ്രഖ്യാപിച്ച് നിരോധിച്ചത് രാഷ്ട്രീയപരമായി...

சவுக்கு சங்கருக்கு மூன்று ஆண்டு சிறைத் தண்டனை! – விவரம் என்ன?

பிரபல யூடியூபரான சவுக்கு சங்கருக்கு மூன்று ஆண்டு சிறை தண்டனை விதித்து...

TG ECET: టీజీ ఈసెట్ 2026 ఫలితాలు విడుదల.. 96.04 శాతం ఉత్తీర్ణత..

ఉద్యోగం చేస్తున్న డిప్లొమా, బీఎస్సీ (మ్యాథమెటిక్స్) అభ్యర్థుల కోసం లేటరల్ ఎంట్రీ...

ಉಪ್ಪು ಸೇವನೆ ಕುರಿತು ಮಾರ್ಗಸೂಚಿ: ನಿಯಮ ಪಾಲಿಸಲು ಸಚಿವ ಯು.ಟಿ ಖಾದರ್ ಮನವಿ

ಬೆಂಗಳೂರು, ಸೆಪ್ಟಂಬರ್, 29,2026 (www.justkannada.in): ಉಪ್ಪು ಸೇವನೆ ಕುರಿತು ಹೊಸ...