15
March, 2026

A News 365Times Venture

15
Sunday
March, 2026

A News 365Times Venture

ನಾಲ್ಕೈದು ವರ್ಷ ಬದುಕಿರುತ್ತೇನೆ: ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು

Date:

ಬೆಂಗಳೂರು, ಫೆಬ್ರವರಿ 15,2025 (www.justkannada.in): ನಾನು ನಾಲ್ಕೈದು ವರ್ಷ ಬದುಕಿರುತ್ತೇನೆ. ಅಲ್ಲಿವರೆಗೂ ನೀರಾವರಿಗಾಗಿ ನಾನು ಹೋರಾಟ ಮಾಡುತ್ತೇನೆ.  ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು,  ಮಹದಾಯಿ ನದಿ ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕಿದೆ. ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​​ ಸೇರಿ ಎಲ್ಲರೂ ಹೋರಾಟ ಮಾಡಬೇಕು. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಶಕ್ತಿಮೀರಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.

ಮಹದಾಯಿ ಯೋಜನೆ ವಿವಾದ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡಲು ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅದಕ್ಕೆ ನಮ್ಮ ಸರ್ಕಾರ ಪ್ರತಿಭಟನೆ ಮಾಡಿ ಅರ್ಜಿ ಹಾಕಿದೆ. ವಿವಾದ ಕೋರ್ಟ್​ನಲ್ಲಿರುವಾಗ ಪ್ರಧಾನಿ ಮೋದಿ ಏನು ಮಾಡುತ್ತಾರೆ. ಹಾಗಾಗಿ ನಮ್ಮವರು ಕೋರ್ಟ್​ನಲ್ಲಿ ಪ್ರಬಲ ವಾದ ಮಾಡಬೇಕು. ನಾವೆಲ್ಲ ಪಕ್ಷಭೇದ ಮರೆತು ಹೋರಾಟ ಮಾಡಬೇಕು ಎಂದು  ಹೆಚ್ ಡಿಡಿ ಹೇಳಿದರು.

ಕರ್ನಾಟಕಕ್ಕೆ25 ಟಿಎಂಸಿ ನೀರು ಕೊಡಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇನೆ. ಮಹದಾಯಿ ಯೋಜನೆಗೆ ಗೋವಾ ಮತ್ತು ಪರಿಸರದ ಸಮಸ್ಯೆ ಇದೆ. ಅದಕ್ಕೆ ಕೊಡಲು ಆಗಲ್ಲ ಅಂತ ಹೇಳಿದ್ದಾರೆ. ಕುಡಿಯುವ ನೀರಿಗಾಗಿ ನಮ್ಮ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡುತ್ತಿದೆ. ಎತ್ತಿನಹೊಳೆ ಯೋಜನೆಗೆ ₹8 ಸಾವಿರ ಕೋಟಿ ಮಂಜೂರು ಮಾಡಿದರೂ. ಈಗ 25 ಸಾವಿರ ಕೋಟಿ ನೀಡಿದ್ದಾರೆ, ಅದು ಎಲ್ಲಿವರೆಗೆ ಬಂದಿದೆ ಗೊತ್ತಿಲ್ಲ ಎಂದು ಹೆಚ್ ಡಿ ದೇವೇಗೌಡ ತಿಳಿಸಿದರು.

Key words: fight, Irrigation, until, last breath, H.D. Deve Gowda

The post ನಾಲ್ಕೈದು ವರ್ಷ ಬದುಕಿರುತ್ತೇನೆ: ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಮಗ್ರ ಆರೋಗ್ಯಕ್ಕೆ ಯೋಗ-ವಿಜ್ಞಾನದ ಸಮನ್ವಯ ಅಗತ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮೈಸೂರು,ಮಾರ್ಚ್,14,2026 (www.justkannada.in):  ಭಾರತ ದೇಶ ಜಗತ್ತಿಗೆ ಕೊಟ್ಟತಂಹ ಕೊಡಗೆಗಳಲ್ಲಿ ಯೋಗವೂ...

ആര്‍ത്തവ അവധി സ്ത്രീകളുടെ അവകാശങ്ങളുടെ ഭാഗമാക്കണം; സുപ്രീം കോടതിക്കെതിരെ പോളിറ്റ് ബ്യൂറോ

ന്യൂദല്‍ഹി: ആര്‍ത്തവ അവധികള്‍ നിയമവിധേയമാക്കിയാല്‍ സ്ത്രീകളെ ജോലിക്കെടുക്കാന്‍ കമ്പനികള്‍ മടിക്കുമെന്ന സുപ്രീം...

`அதிமுக உறுப்பினர் கார்டை கிழிச்சு போடக்கூட மனசு வரலை!'- சசிகலா கட்சியின் நிறுவன தலைவர் சக்கரவர்த்தி

தனது ஆதரவாளர் ஒருவர் பதிவு செய்து வைத்திருந்த ‘அகில இந்திய புரட்சித்...

Breaking News: మొయినాబాద్ ఫామ్ హౌస్‌లో కాల్పుల కలకలం.. పోలీసులపై డ్రగ్స్ బ్యాచ్ దాడి.!

హైదరాబాద్ శివార్లలోని మొయినాబాద్‌ మరోసారి వార్తల్లో నిలిచింది. ఒక మాజీ ఎమ్మెల్యేకు...