29
April, 2026

A News 365Times Venture

29
Wednesday
April, 2026

A News 365Times Venture

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು ಏಪ್ರಿಲ್, 2,2025 (www.justkannada.in):  ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು.

ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು. ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗುತ್ತದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದರು.

ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಅಪಾರ ಮೆಚ್ಚುಗೆಯ ವಿಷಯ ಎಂದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ  ಎಂದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

Key words: role, police, very important,  maintaining, law and order, CM Siddaramaiah

The post ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്‍ ബുദ്ധിപൂര്‍വം പെരുമാറണം, പെട്ടന്ന് കരാറിലെത്തണമെന്ന് തോക്കുമായി ട്രംപ്; തുറമുഖങ്ങള്‍ക്കെതിരായ ഉപരോധം നീട്ടാന്‍ യു.എസ്

വാഷിങ്ടണ്‍: ഇറാന്‍ ഭരണകൂടം എത്രയും വേഗം കരാറിലെത്തണമെന്ന് അമേരിക്കന്‍ പ്രസിഡന്റ് ഡൊണാള്‍ഡ്...

‘மின்மாற்றிகள் கொள்முதலில் எந்த தவறும் நடக்கவில்லை!’ – செந்தில் பாலாஜி சொல்லும் விளக்கம்

மின்சாரத்துறை அமைச்சராக செந்தில் பாலாஜி இருந்தபோது மின்மாற்றிகள் கொள்முதல் செய்ததில் அரசுக்கு...

Kerala Election Exit poll 2026: కేరళలో హస్తం హవా.. పినరయికి గుడ్ బై..

Kerala Elections Exit poll 2026: నాలుగు రాష్ట్రాలు, ఒక కేంద్రపాలిత...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ...