26
March, 2026

A News 365Times Venture

26
Thursday
March, 2026

A News 365Times Venture

ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

Date:

ಮಂಡ್ಯ,ಏಪ್ರಿಲ್,22,2025 (www.justkannada.in): ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯನ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು. ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು ಸಿಎಂ ಸಿದ್ದರಾಮಯ್ಯ‌ ಕರೆ ನೀಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.

ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ. ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು.

Key words:  worship,  God , optimistic,  CM Siddaramaiah

The post ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್  ಟೀಕೆ

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ...

ഇറാന്റെ തിരിച്ചടിയില്‍ സൈനിക താവളങ്ങള്‍ തകര്‍ന്നു; ഹോട്ടലുകളില്‍ അഭയം തേടി അമേരിക്കന്‍ സൈന്യം; റിപ്പോര്‍ട്ട്

വാഷിങ്ടണ്‍: ഇറാന്റെ പ്രത്യാക്രമണത്തില്‍ സൈനിക താവളങ്ങള്‍ തകര്‍ന്നതോടെ, പശ്ചിമേഷ്യയിലെ യു.എസ് സേന...

"நாங்கள் சிரித்துக்கொண்டே அழுகிறோம்.!"- திமுக-வின் தொகுதிப் பங்கீடு குறித்து மதிமுக அர்ஜுனராஜ்

திமுக தங்களுக்கு கொடுத்த எண்ணிக்கை, சின்னம் தொடர்பாக தங்களுக்கு வருத்தம் உள்ளதாக...

Karnataka: క్లాస్‌లోనే విద్యార్థినికి ప్రొఫెసర్ ‘‘ఐ లవ్ యూ’’.. ఆ తర్వాత ఏం జరిగిందంటే..

Karnataka: బాధ్యతాయుతమైన ప్రొఫెసర్ హోదాలో ఉన్న ఒక వ్యక్తి నీచంగా ప్రవర్తించాడు....