25
March, 2026

A News 365Times Venture

25
Wednesday
March, 2026

A News 365Times Venture

ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಮೇ,6,2025 (www.justkannada.in): ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ  ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವ ಎಂ.ಬಿ ಪಾಟೀಲ್, ಈ ಮನವಿಯ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ತುಮಕೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಬರಬೇಕಾದ ಅಗತ್ಯವಿದೆ ಎಂದರು.

ಬೆಂಗಳೂರಿಗೆ ತಾಗಿಕೊಂಡಿರುವ ತುಮಕೂರು ಜಿಲ್ಲೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಅಲ್ಲಿ ಒಂದು ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ಅಗತ್ಯವಿದೆ ಎಂದು ಗೃಹ ಸಚಿವ ಪರಮೇಶ್ವರ್ ಕೂಡ ಹೇಳುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ನಗರದ ಮಧ್ಯಭಾಗದಲ್ಲಿದೆ. ಹೀಗಾಗಿ ಇಲ್ಲಿ ಪಾರ್ಕಿಂಗ್, ಸಂಚಾರ ದಟ್ಟಣೆ ಇತ್ಯಾದಿ ಸಮಸ್ಯೆಗಳಿವೆ. ತುಮಕೂರಿನಲ್ಲೂ ಒಂದು ಕ್ರೀಡಾಂಗಣ ಬಂದರೆ ಅಲ್ಲಿನ ಪ್ರತಿಭೆಗಳಿಗೆ ಉಜ್ವಲ ಅವಕಾಶಗಳು ಸಿಗಲಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವಿಜಯಪುರದಲ್ಲೂ ಇಂಥದ್ದೊಂದು ಕ್ರೀಡಾಂಗಣ ಬರಬೇಕು ಎನ್ನುವುದು ತಮ್ಮ ಕನಸಾಗಿದೆ. ಇಂತಹ ಮೈದಾನದಲ್ಲಿ ಪಂಚತಾರಾ ಹೋಟೆಲ್ ಸೇರಿ ಅನೇಕ ಅನುಕೂಲಗಳು ಬರಲಿವೆ ಎಂದು ಪಾಟೀಲ್ ನುಡಿದಿದ್ದಾರೆ.

ಕ್ರೀಡೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ 41 ಎಕರೆ ಜಾಗವನ್ನು ರಿಯಾಯಿತಿ ದರದಲ್ಲಿ ಅಂದರೆ ಎಕರೆಗೆ ₹15 ಲಕ್ಷದಂತೆ ನೀಡಲಾಗಿದೆ ಎಂದು ಪಾಟೀಲ ಹೇಳಿದರು.

ಕಾರ್ಯಕ್ರಮದಲ್ಲಿ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Key words: Cricket ground, Tumkur, Minister, M.B. Patil

The post ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಹೋಟೆಲ್ ಗಳಿಗೆ ಕೇಂದ್ರ ಖಡಕ್ ಸೂಚನೆ

ನವದೆಹಲಿ,ಮಾರ್ಚ್,25,2026 (www.justkannada.in):  ಗ್ಯಾಸ್ ಸಿಲಿಂಡರ್ ಅಭಾವದ ನೆಪ ಹೇಳಿ ಬಿಲ್...

ഫലസ്തീനെ ദ്രോഹിക്കാനുള്ള ലൈസന്‍സ് ലോകം ഇസ്രഈലിന് നല്‍കി: ഫ്രാന്‍സെസ്‌ക ആല്‍ബനീസ്

ന്യൂയോര്‍ക്: ഇസ്രഈലിനെതിരെ രൂക്ഷ വിമര്‍ശനവുമായി ഐക്യരാഷ്ട്രസഭയുടെ പ്രത്യേക പ്രതിനിധി ഫ്രാന്‍സെസ്‌ക ആല്‍ബനീസ്....

'மூப்பனாரின் ஆன்மா மன்னிக்காது.!' – பாஜகவிடம் கட்சியை அடகு வைத்த ஜி.கே.வாசன்?

என்.டி.ஏ கூட்டணியில் 5 தொகுதிகளை வாங்கிக் கொண்டு பாஜக-வின் தாமரை சின்னத்தில்...

Iran War: ఇరాన్ యుద్ధంపై మొసాద్ సంచలన రిపోర్ట్..!

Iran War: మిడిల్ ఈస్ట్‌లో జరుగుతున్న ఇరాన్ యుద్ధం ఇప్పట్లో ముగిసేలా...