ಮೈಸೂರು,ಮೇ,27,2025 (www.justkannada.in): 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಜೆ.ಎಸ್.ಜಗದೀಶ್ ಬಳಗದ ವತಿಯಿಂದ ಮೇ 31 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಸಂಜೆ 5 ಗಂಟೆಗೆ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್ ನೇತೃತ್ವದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಮೈಸೂರು-ಕೊಡಗು ಸಂಸದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ ವಿದ್ಯಾರ್ಥಿಗಳನ್ನು ಅಭಿನಂದಿಸಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ನೈಪುಣ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಘು ಆರ್.ಕೌಟಿಲ್ಯ ಶುಭನುಡಿ ಹೇಳಲಿದ್ದಾರೆ. ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ವಿದ್ಯಾ ವಿಕಾಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ ಉಪಸ್ಥಿತರಿರಲಿದ್ದಾರೆ.
Key words: Talent award, program ,J.S. Jagadish balaga, Mysore
The post ಮೇ 31 ರಂದು ಜೆ.ಎಸ್ ಜಗದೀಶ್ ಬಳಗದ ವತಿಯಿಂದ ಪ್ರತಿಭಾ ಪುರಷ್ಕಾರ ಕಾರ್ಯಕ್ರಮ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





