12
March, 2026

A News 365Times Venture

12
Thursday
March, 2026

A News 365Times Venture

ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ- ಸಿಎಂ ಸಿದ್ದರಾಮಯ್ಯ

Date:

ನವದೆಹಲಿ, ಜೂನ್,25, 2025 (www.justkannada.in): ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ  ಏಳು ಬಿಲ್ಲುಗಳನ್ನು  ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು  ತಿಳಿಸಿದ್ದು, ಅವುಗಳನ್ನು  ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ,  ವಾರದ ಹಿಂದೆ 16 ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14 ನೇ ಹಣಕಾಸು ಆಯೋಗದಲ್ಲಿ 4.7% ಅಡ್ಡವಾಗಿ  ತೆರಿಗೆ ಹಂಚಿಕೆಯಾಗಿತ್ತು. 15 ನೇ ಹಣಕಾಸು ಆಯೋಗದಲ್ಲಿ  3.6% ಆಗಿದೆ. ಶೇಕಡಾ  1.1% ಕಡಿಮೆಯಾಗಿದ್ದು, ಇದು ಒಟ್ಟಾರೆ  ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು 80000 ಕೋಟಿ ಕಡಿಮೆಯಾಗಿದೆ ಎಂದರು.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ  63 ಸಾವಿರ ಕೋಟಿ,  ಅನ್ಯಾಯವಾಗಿದೆ. ರಾಜ್ಯಕ್ಕೆ  ವಿಶೇಷ ಅನುದಾನ 5495 ಕೋಟಿ ಮೀಸಲಿಡಿಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್ ಗೆ 3000 ಕೋಟಿ,  ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ 3000ಕೋಟಿ ಸೇರಿದಂತೆ  ಒಟ್ಟು 11495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ 80000 ಕೋಟಿ  ನಮಗೆ ಕಡಿಮೆಯಾಗಿದೆ. ಇದು ಬಹಳ  ದೊಡ್ಡ ಮೊತ್ತವಾಗಿದೆ ಎಂಡ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ದೇಶದ  ಆರ್ಥಿಕ  ಬೆಳವಣಿಗೆಗೆ ಹೆಚ್ಚಿನ  ಕೊಡುಗೆ ನೀಡುತ್ತಿದೆ

ದೇಶದ  ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ  5% ರಷ್ಟಿದೆ. ಕರ್ನಾಟಕ  8.7% ಜಿಡಿಪಿಗೆ ಕೊಡುಗೆ ನೀಡುತ್ತಿದ್ದೇವೆ. 2011-12ರಲ್ಲಿ  7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್ ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.  ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ  ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ ಎಂದರು.

ಹಣಕಾಸಿನ ಕಾರ್ಯಕ್ಷಮತೆ ತೋರದ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನ-ಕೇಂದ್ರದ ಕ್ರಮ ಸರಿಯಿಲ್ಲ

ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20 ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ  ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ ಎಂದರು.

ವಿಶೇಷ ಅನುದಾನಕ್ಕೆ ಮನವಿ

ಬೆಂಗಳೂರು ಜಾಗತಿಕ ನಗರವಾಗಿದ್ದು,  ನಗರದ ಬಂಡವಾಳ ಕಾರ್ಯಗಳಿಗೆ 1.15 ಲಕ್ಷ ಕೋಟಿ ಬೇಕಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.  ಮಲೆನಾಡು ಮತ್ತು ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಮನವಿಯನ್ನು ಪರಿಶೀಲಿಸುವ ಬಗ್ಗೆ ಕೇಂದ್ರ ವಿತ್ತಸಚಿವರಿಂದ ಭರವಸೆ

ರಾಜ್ಯದ ಮನವಿಗೆ ಕೇಂದ್ರ ವಿತ್ತ ಸಚಿವರು ಸ್ಪಂದಿಸಿದರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತಸಚಿವರು ನೀಡಿರುವುದಾಗಿ ತಿಳಿಸಿದರು.vtu

Key words: CM Siddaramaiah,  requests, President, approve, seven bills

The post ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು...

ബത്തേരിയിലെ ശുചീകരണ തൊഴിലാളികളെ പിരിച്ചുവിടാന്‍ യു.ഡി.എഫ് ഭരണസമിതി; പ്രതിഷേധം

ബത്തേരി: സുല്‍ത്താന്‍ ബത്തേരിയിലെ ശുചീകരണ തൊഴിലാളികളെ പിരിച്ചുവിടാന്‍ യു.ഡി.എഫ് ഭരണസമിതിയുടെ നീക്കം....

`மக்கள் திமுக அரசை தூக்கி எறிய விரும்புகிறார்கள்; NDA மட்டுமே…' – திருச்சியில் பிரதமர் மோடி உரை

தமிழ்நாடு சட்டமன்றத் தேர்தலுக்கான களம் பரபரக்கிறது. தொடர்ந்து முக்கிய அரசியல் கட்சித்...

Interest Rates Hike: ఆ బ్యాంక్‌లో లోన్ తీసుకున్న వారికి బిగ్‌షాక్..పెరగనున్న వడ్డీ రేట్లు..

సొంత ఇల్లు కట్టుకోవాలన్నా లేదా వ్యాపారాన్ని విస్తరించాలన్నా చాలామంది బ్యాంక్ రుణాలపైనే...