12
March, 2026

A News 365Times Venture

12
Thursday
March, 2026

A News 365Times Venture

ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ: ಕೆ.ವಿ.ಪ್ರಭಾಕರ್

Date:

ತುಮಕೂರು ಜೂನ್,26,2025 (www.justkannada.in): ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ.  ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ‌ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಕೆ.ವಿ.ಪ್ರಭಾಕರ್ ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ.  ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ ಎಂದರು.

ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ಪದೇ ಪದೇ ಕುವೆಂಪು ಅವರ ಒಂದು ಮಾತನ್ನು ನೆನಪಿಸಿಕೊಳ್ಳುತ್ತಾರೆ. “ಮಗು ಹುಟ್ಟುವಾಗ ವಿಶ್ವ ಮಾನವನಾಗಿ ಹುಟ್ಟುತ್ತದೆ. ಬೆಳೆಯುತ್ತಾ ಅಲ್ಪ ಮಾನವನನ್ನಾಗಿ ಮಾಡಲಾಗುತ್ತದೆ”.

ಪತ್ರಕರ್ತರಾಗುವವರು ಪೂರ್ವಾಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು ಇರುವುದನ್ನು ಇರುವ ಹಾಗೆ ಗಮನಿಸಬೇಕು.  ಹೀಗಾದಾಗ ಮಾತ್ರ ಸಾಮಜಿಕ‌ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ. ಇದರಿಂದಾಗಿ ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಹೆಚ್ಚು ಅನುಕೂಲ ಮತ್ತು ಮಹತ್ವ ಸಿಗುತ್ತದೆ ಎಂದರು.

ಇತ್ತೀಚಿನ ದಶಕಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ ಕಾರಣಕ್ಕೆ ಕ್ರಾಂತಿಕಾರಿ ಬದಲಾವಣೆಗಳು ಸಂಭವಿಸುತ್ತಿವೆ. ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮವನ್ನೂ ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕಡೆಗೆ ಧಾವಿಸಿ ಬಂದಿದ್ದೇವೆ. ಈ ಬದಲಾವಣೆಯು ಮಾಹಿತಿ ಹರಿವಿನ ವೇಗವನ್ನು ಹೆಚ್ಚಿಸಿದೆ, ಆದರೆ ಅದೇ ವೇಳೆ ಸುಳ್ಳು ಸುದ್ದಿ, clickbait, ದ್ವೇಷ ಭಾಷೆ ಇತ್ಯಾದಿಗಳ ಹೊಸ ಹೊಸ ಸವಾಲುಗಳನ್ನೂ, ಅಪಾಯಗಳನ್ನೂ ಮನುಷ್ಯ ಜಗತ್ತಿನ ಮುಂದಿಟ್ಟಿದೆ. ಇಂತಹ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಮಾಧ್ಯಮ ಶಿಕ್ಷಣವು ನೈತಿಕತೆ ಮತ್ತು ಜವಾಬ್ದಾರಿಯನ್ನೂ ಜೊತೆಗೆ ಕಲಿಸಬೇಕಾಗಿದೆ. ಮೊದಲು ಸತ್ಯ, ನಂತರ ವೇಗ ಎಂಬ ನುಡಿಯು ಈಗ ಇನ್ನೂ ಹೆಚ್ಚು ಪ್ರಸ್ತುತವಾಗಿದೆ. Chat GPT ಇರಬಹುದು ಅಥವಾ AI  ಯುಗದಲ್ಲಿ ನಿಮ್ಮತನವನ್ನು ಕಳೆದುಕೊಳ್ಳದೆ ಕಾರ್ಯನಿರ್ವಹಿಸಿದರೆ, ಕೃತಕತೆ ಇಲ್ಲದ ಯಶಸ್ಸು ಸಾಧ್ಯ ಎಂದು ಕೆ.ವಿ ಪ್ರಭಾಕರ್ ನುಡಿದರು.

ಇದನ್ನು ಸಾಧಿಸಲು ಶಿಕ್ಷಣ ಮತ್ತು ತರಬೇತಿಯ ಅಗತ್ಯತೆ ಇದೆ.

ಪ್ರತಿಯೊಬ್ಬ ಮಾಧ್ಯಮ ವಿದ್ಯಾರ್ಥಿಗೆ ನಿಖರ ಮಾಹಿತಿ ಸಂಗ್ರಹಣೆ, ಬೋಧನೆಯ ಶೈಲಿ, ವಿಶ್ಲೇಷಣಾತ್ಮಕ ದೃಷ್ಟಿಕೋನ ಹಾಗೂ ಸಮಾಜದ ಅಸಮಾನತೆಗಳನ್ನು ಗುರುತಿಸುವ ನೈತಿಕ ಬದ್ಧತೆ ಅತ್ಯಗತ್ಯ. ಮಾಧ್ಯಮ ಇಂದಿನ ಕಾಲದಲ್ಲಿ ಕೇವಲ ಸುದ್ದಿಯನ್ನು ನೀಡುವುದಲ್ಲ. ಇವು ಆಲೋಚನೆಗಳನ್ನು, ಅಭಿಪ್ರಾಯಗಳನ್ನು ರೂಪಿಸುವ ಶಕ್ತಿಯನ್ನೂ ಹೊಂದಿವೆ. ಈ ಕಾರಣಕ್ಕಾಗಿಯೇ ಮಾಧ್ಯಮಗಳನ್ನು opinion makers ಎಂದು ಪರಿಗಣಿಸಲಾಗುತ್ತಿದೆ. ನಮ್ಮ ಸರ್ಕಾರ ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದೆ. ಮಾಧ್ಯಮ ಅಕಾಡೆಮಿಯ ಮೂಲಕ ತರಬೇತಿ ಶಿಬಿರಗಳು, ಸಂವಾದ ಸಭೆಗಳು, ಗ್ರಾಮೀಣ ಪತ್ರಕರ್ತರ ಪ್ರೋತ್ಸಾಹ, ಡಿಜಿಟಲ್ ಮಾಧ್ಯಮ ತರಬೇತಿ ಶಿಬಿರಗಳನ್ನು ಆಯೋಜಿಸುವ ಮೂಲಕ ಸತ್ಯನಿಷ್ಠ ಸಮಾಜಮುಖಿ ಪತ್ರಕರ್ತರನ್ನು ರೂಪಿಸುವ ದಿಕ್ಕಿನಲ್ಲಿ ಪ್ರಯತ್ನಿಸುತ್ತಿದೆ ಎಂದು ಕೆ.ವಿ ಪ್ರಭಾಕರ್ ಹೇಳಿದರು.

ನೀವು ಪತ್ರಿಕೋದ್ಯಮವನ್ನು ವೃತ್ತಿಯಾಗಿ ಆಯ್ಕೆ ಮಾಡುತ್ತಿದ್ದರೆ, ಇದು ಕೇವಲ ಉದ್ಯೋಗವಲ್ಲ. ಇದು ಸಮಾಜದ ಧ್ವನಿ ಆಗುವ, ಧ್ವನಿ ಇಲ್ಲದವರ ಮಾತುಗಳನ್ನು ಎತ್ತಿ ಹಿಡಿಯುವ, ಮತ್ತು ಅಧಿಕಾರದ ಎದುರು ಸತ್ಯವನ್ನು ಹೇಳುವ ಧೈರ್ಯದ ಮಾರ್ಗ ಮತ್ತು ಮಾಧ್ಯಮ ಎನ್ನುವುದನ್ನು ನೆನಪಿನಲ್ಲಿಡಬೇಕು. ಪ್ರೀತಿಯ ವಿದ್ಯಾರ್ಥಿಗಳೇ, ಕಲಿಕೆಯ ದಿನಗಳಲ್ಲಿ ಸೃಜನಶೀಲತೆ, ಅಧ್ಯಯನಶೀಲತೆ ಸಂಶೋಧನಾ ಮನೋಭಾವ, ಮತ್ತು ಸಾಮಾಜಿಕ ಜವಾಬ್ದಾರಿಯ ಚಿಂತನೆಯನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದರು.

ತುಮಕೂರು ವಿಶ್ವ ವಿದ್ಯಾಲಯ ಆಯೋಜಿಸಿರುವ ಈ ಮಾಧ್ಯಮ ಹಬ್ಬವು ಮಾಧ್ಯಮ ಕ್ಷೇತ್ರದಲ್ಲಿ ಪ್ರಜ್ಞಾವಂತ ಯುವ ಪ್ರತಿಭೆಗಳ ಹುಟ್ಟಿಗೆ ವೇದಿಕೆಯಾಗಲಿ ಎಂದು ಆಶಿಸುತ್ತೇನೆ ಎಂದರು.

ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶ ಖಾನಂ, ಕಾರ್ಯದರ್ಶಿ ಸಹನಾ ಎಂ, ಪ್ರಜಾ ಪ್ರಗತಿ ಸಂಪಾದಕ ನಾಗಣ್ಣ, ಸಿಂಡಿಕೇಟ್ ಸದಸ್ಯರಾದ ಮನೋಜ್, ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ.ಸತೀಶ್ ಗೌಡ, ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಕ್ಷಾಯಿಣಿ ಅವರು ಉಪಸ್ಥಿತರಿದ್ದರು.

SSLC ಯಿಂದಲೇ ಸೆಳೆತ

ನನಗೆ SSLC ಯಿಂದಲೇ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಳ್ಳುವ ಅವಕಾಶ ಸಿಕ್ಕಿದೆ. ನಾನು ಲಿಫ್ಟ್ ಹತ್ತಿಕೊಂಡು ಪತ್ರಿಕಾವೃತ್ತಿಯಲ್ಲಿ ಬೆಳೆಯಲಿಲ್ಲ. ಪತ್ರಿಕೆ ಹಂಚುವ ಕೆಲಸದಿಂದ ಆರಂಭಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಆಗುವ ಮಟ್ಟಕ್ಕೆ ಬೆಳೆದೆ ಎಂದು ತಮ್ಮ ಬೆಳವಣಿಗೆಯನ್ನು ಸ್ಮರಿಸಿದರು.

ಪ್ರಶ್ನೆ ಕೇಳುವ ಮೊದಲು ಅಧ್ಯಯನ ಅಗತ್ಯ

ಪತ್ರಕರ್ತರು ಪ್ರಶ್ನೆ ಕೇಳುವುದನ್ನು ಬಿಡಬಾರದು ಆದರೆ, ಪ್ರಶ್ನೆ ಮಾಡುವ ಮೊದಲು ಆ ವಿಷಯದ ಬಗ್ಗೆ ಅಧ್ಯಯನ ನಡೆಸಿರಬೇಕು. ವಾಪಾಸ್ ಪ್ರಶ್ನೆ ಕೇಳಿದರೆ ಪತ್ರಕರ್ತರು ಮುಖ ಮುಖ ನೋಡಬಾರದು. ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ ಎಂದು ಕೆ.ವಿ ಪ್ರಭಾಕರ್ ಸಲಹೆ ನೀಡಿದರು.vtu

Key words:  effective, journalist, understanding, society, K.V. Prabhakar

The post ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ: ಕೆ.ವಿ.ಪ್ರಭಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ...

ഇസ്രഈലിലെ അംബാസഡറെ ഔദ്യോഗികമായി പിൻവലിച്ച് സ്പെയിൻ

മാഡ്രിഡ്: 2021 മുതൽ സ്പെയിനിന്റെ ഇസ്രഈൽ അംബാസഡറായിരുന്ന അന്ന സലോമോനയെ ഔദ്യോഗികമായി...

“திமுக அரசியல் கட்சியல்ல, அது ஒரு கார்ப்பரேட் கம்பெனி" – திருச்சியில் எடப்பாடி பழனிசாமி

தமிழ்நாடு சட்டமன்றத் தேர்தலுக்கான களம் பரபரக்கிறது. தொடர்ந்து முக்கிய அரசியல் கட்சித்...

Off The Record: వాసుపల్లి వ్యవహారం వైసీపీ నాయకత్వానికి తలపోటైందా?

Off The Record: వాసుపల్లి గణేష్ కుమార్….విశాఖ దక్షిణ నియోజకవర్గ మాజీ...