5
May, 2026

A News 365Times Venture

5
Tuesday
May, 2026

A News 365Times Venture

ಇಂದಿನಿಂದ ಪಡಿತರ ಲಾರಿ ಮಾಲೀಕರು, ಚಾಲಕರ ಮುಷ್ಕರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್

Date:

ಬೆಂಗಳೂರು, ಜುಲೈ 8,2025 (www.justkannada.in):  ನಾಲ್ಕು ತಿಂಗಳಿಂದ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ ನೀಡದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರದ ವಿರುದ್ದ ಪಡಿತರ ಲಾರಿ ಮಾಲೀಕರು, ಚಾಲಕರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದಾರೆ.

ನಾಲ್ಕು ತಿಂಗಳಿಂದ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ 260 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಲಾರಿ ಮಾಲೀಕರು, ಚಾಲಕರು ಇಂದಿನಿಂದ ಮುಷ್ಕರ  ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ಈ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಬಾಕಿ ಹಣ ಬಿಡುಗಡೆಗೆ  ಸರ್ಕಾರಕ್ಕೆ 15ದಿನಗಳ ಗಡುವು ನೀಡಲಾಗಿತ್ತು. ಆದರೆ ಸರ್ಕಾರ ಪಾವತಿ ಮಾಡದ ಹಿನ್ನೆಲೆಯಲ್ಲಿ  ಪಡಿತರ ಲಾರಿ ಮಾಲೀಕರು ಚಾಲಕರು ಅಕ್ಕಿ ಸಾಗಾಣೆ ಮಾಡುವುದನ್ನ ಬಂದ್ ಮಾಡಿದ್ದಾರೆ. ಬಾಕಿ ಹಣ ಬಿಡುಗಡೆಗೆ ಒತ್ತಾಯಿಸಿ ಗೋದಾಮು ಮುಂದೆ ಲಾರಿ ನಿಲ್ಲಿಸಿ ಮುಷ್ಕರ ಹೂಡಿದ್ದಾರೆ.

ಈ ಕುರಿತು  ಮಾತನಾಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ವಿ‌.ಆರ್.ಷಣ್ಮುಗಪ್ಪ, ಯಾವುದೇ ಭರವಸೆ ಈಡೇರಿಸದ ಹಿನ್ನೆಲೆ ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್​ ಎಂದಿದ್ದಾರೆ. ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಹೇಳಿದ್ದಾರೆ.

5 ತಿಂಗಳಿನಿಂದ 260 ಕೋಟಿ ರೂ. ಬಿಡುಗಡೆ ಆಗಬೇಕು. ಜೂ.19ರಂದು 100 ಕೋಟಿ ರೂ. ಹಾಕುವುದಾಗಿ ಹೇಳಿದ್ದರು. ಆದರೆ ಈವರೆಗೂ 1 ರೂ. ಹಣ ಬಂದಿಲ್ಲ ನಮ್ಮ ಖಾತೆಗೆ. ಆಹಾರ ಸಚಿವರು, ಅಧಿಕಾರಿಗಳು ಮಾತುಕತೆಗೆ ಕರೆದಿಲ್ಲ, ಹಾಗಾಗಿ ಇಂದಿನಿಂದ ಮುಷ್ಕರ ಮಾಡಲು ಮುಂದಾಗಿದ್ದೇವೆ. ಹಣ ಬಂದ ಮೇಲೆ ನಾವು ಅಕ್ಕಿ ಸರಬರಾಜು ಮಾಡಲು ಮುಂದಾಗುತ್ತೇವೆ ಎಂದಿದ್ದಾರೆ.vtu

Key words: Ration, truck owners ,drivers ,strike

The post ಇಂದಿನಿಂದ ಪಡಿತರ ಲಾರಿ ಮಾಲೀಕರು, ಚಾಲಕರ ಮುಷ್ಕರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്നെ ജയിപ്പിച്ചത് ഹിന്ദുക്കള്‍, അവര്‍ക്ക് വേണ്ടി പ്രവര്‍ത്തിക്കും; മുസ്‌ലിം വോട്ടുകള്‍ പൂര്‍ണമായും തൃണമൂലിന് പോയി: സുവേന്ദു അധികാരി

ഹാല്‍ദിയ: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസിനെ പരാജയപ്പെടുത്തി ബി.ജെ.പി...

TVK: 'சென்னைவாசி, சிபி சத்யராஜின் ஆதரவு' – சிங்காநல்லூரை வென்ற ஸ்ரீ கிரி பிரசாத்தின் பின்னணி என்ன?

சிங்காநல்லூர் தொகுதியில் மொத்தம் உள்ள 2 லட்சத்து 69 ஆயிரத்து 941...

Gold and Silver Prices: మళ్లీ తగ్గుతున్న బంగారం, వెండి ధరలు..

Gold and Silver Prices: బంగారం, వెండి ధరలు ఇటీవల వరుసగా...

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ...