13
March, 2026

A News 365Times Venture

13
Friday
March, 2026

A News 365Times Venture

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

Date:

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು ಹೋಗಿದ್ದರು. ಆದರೆ ಮತ್ತೆ ಯಾಕೆ ಬಿಜೆಪಿಗೆ ಬಂದರು ಗೊತ್ತಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಅಸಮಾಧಾನ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಜನ್ಮದಿನ ಕಾರ್ಯಕ್ರಮದಲ್ಲಿ ಬಿಜೆಪಿಯ ರೆಬಲ್ಸ್ ಟೀಮ್ ನಾಯಕರು ಭಾಗಿಯಾಗಿದ್ದರು. ಈ ವೇಳೆ  ಮಾತನಾಡಿದ ಅರವಿಂದ ಲಿಂಬಾವಳಿ ಅವರು, ಯಡಿಯೂರಪ್ಪ ಪಕ್ಷ ಬಿಟ್ಟು ಹೋಗಿದ್ದರು.ಅವರು ಮತ್ತೆ ಯಾಕೆ ಬಂದರೋ ಗೊತ್ತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಕದವನ್ನ ತಟ್ಟುತ್ತಿದ್ದರು. ಇದನ್ನು ತಡೆದು, ಮತ್ತೆ ಬಿಎಸ್ ವೈರನ್ನ ಮುಖ್ಯಮಂತ್ರಿ ಮಾಡಿದ್ದು ಸಿದ್ದೇಶ್ವರ ಅವರು. ಶಿಕಾರಿಪುರದಲ್ಲಿ ಗೆಲುವು ಸಾಧಿಸಲು ಸಿದ್ದೇಶ್ವರ್ ಅವರೇ ಕಾರಣ ಎಂದರು.

ಅನಂತಕುಮಾರ್ ಅವರೊಂದಿಗೆ ಸಮಸ್ಯೆ ಎದುರಾದಾಗ ನಾವು ಸಂಪರ್ಕ ಮಾಡುತ್ತಿದ್ದದ್ದು ಸಿದ್ದೇಶ್ವರ ಅವರನ್ನೇ. ಅವರ ಮೂಲಕ ಮಾತನಾಡಿಸಿ ರಾಜ್ಯ ಮಟ್ಟದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ಆದರೆ ಜತೆಗೆ ನಿಂತ ಸ್ನೇಹಿತನನ್ನು ಯಡಿಯೂರಪ್ಪ ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಬೇಸರವಿದೆ ಎಂದು ಅರವಿಂದ ಲಿಂಬಾವಳಿ ಕಿಡಿಕಾರಿದರು.vtu

Key words: BJP, BSY, Aravind Limbavali, Davanagere

The post ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ധനക്ഷാമമില്ല, എല്‍.പി.ജി ഉത്പാദനം 28% വര്‍ധിപ്പിച്ചു; വ്യാജപ്രചരണം വേണ്ട: ഹര്‍ദീപ് സിങ്

ന്യൂദല്‍ഹി: ഇന്ത്യയിലെ ഊര്‍ജ ഇറക്കുമതി സുരക്ഷിതമായി തുടരുകയാണെന്ന് പെട്രോളിയം മന്ത്രി ഹര്‍ദീപ്...

சென்னை ரயில் நிலையங்களில் இந்தி எழுத்துகள் அழிப்பு போராட்டத்தில் மே 17 இயக்கத்தினர்!

தமிழ்நாட்டில் இந்தி திணிப்புக்கு எதிராக தொடர்ந்து குரல் எழுப்பப்பட்டு வருகிறது. அந்தவகையில்...

Lifetime Achievement Award: ‘ది వాల్’ రాహుల్ ద్రావిడ్ కు అరుదైన గౌరవం..

Lifetime Achievement Award: భారత మాజీ క్రికెటర్, మాజీ టీమిండియా కోచ్,...