4
May, 2026

A News 365Times Venture

4
Monday
May, 2026

A News 365Times Venture

‘ಕೈ’ ಹೈಕಮಾಂಡ್ ರಾಜ್ಯದಲ್ಲಿ ‘ರಣದೀಪ್’ ಆಡಳಿತ ಹೇರಿದೆ-ಆರ್.ಅಶೋಕ್

Date:

ಬೆಂಗಳೂರು,ಜುಲೈ,16,2025 (www.justkannada.in): ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ರಣದೀಪ್ ಆಡಳಿತ ಹೇರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಶಾಸಕರು ಸಚಿವರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಆರ್.ಅಶೋಕ್, ರಾಜ್ಯದಲ್ಲಿ “ರಣದೀಪ್” ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ಲೇವಡಿ ಮಾಡಿದ್ದಾರೆ.

ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ”ರಣದೀಪ್ ” ಆಡಳಿತ ಹೇರಿದೆ.

ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್  ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ.

ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ  ಹಿಡಿತವಿಲ್ಲ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ, ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ರಾಹುಲ್ ಗಾಂಧಿ ಅವರಿಗೆ ಶಕ್ತಿ ಇಲ್ಲ.

ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ  ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.vtu

Key words: Congress, high command, imposed, ‘Randeep rule, R. Ashok

The post ‘ಕೈ’ ಹೈಕಮಾಂಡ್ ರಾಜ್ಯದಲ್ಲಿ ‘ರಣದೀಪ್’ ಆಡಳಿತ ಹೇರಿದೆ-ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രി ഫേസ്ബുക്ക് ബയോ തിരുത്തിയത് ഇന്നല്ല, വോട്ടെണ്ണല്‍ കാരണവുമല്ല; പി.ബി അംഗമെന്ന് മാറ്റിയത് മാര്‍ച്ച് 16ന്

തിരുവനന്തപുരം: വോട്ടെണ്ണലിന് തൊട്ടുമുമ്പ് മുഖ്യമന്ത്രി പിണറായി വിജയന്‍ തന്റെ ഫേസ്ബുക്ക് ബയോ തിരുത്തിയെന്ന...

"சாவர்க்கர் ஆங்கிலேய அரசுக்கு கருணை மனுக்களை எழுதியது உண்மை; ஆனால்…" – சாவர்க்கரின் கொள்ளு பேரன்

லண்டனில் கடந்த 2023-ஆம் ஆண்டு ஆற்றிய உரையில், சாவர்க்கர் குறித்து அவதூறாகப்...

KKR: ద్వితియార్థంలో దూసుకుపోతున్న కేకేఆర్.. ఈ ఒక్క సూత్రమే వారి జోరుకు కారణమా..?

ఐపీఎల్ 2026లో కోల్‌కతా నైట్ రైడర్స్ (KKR) వరుస విజయాలతో దూసుకుపోతోంది....

‘അവര്‍ ഇനിയും മതിയായ വില നല്‍കിയിട്ടില്ല’; ഇറാന്റെ പുതിയ സമാധാന കരാറും തള്ളി ഡൊണാള്‍ഡ് ട്രംപ്

വാഷിങ്ടണ്‍: ടെഹ്റാന്‍ മുന്നോട്ടുവെച്ച പുതിയ സമാധാന കരാറും അംഗീകരിക്കാന്‍ സാധ്യതയില്ലെന്ന സൂചനയുമായി...