14
March, 2026

A News 365Times Venture

14
Saturday
March, 2026

A News 365Times Venture

OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ

Date:

ಮೈಸೂರು ಜು 19, ೨೦೨೫:  ಏಳನೇ ವೇತನ‌ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಜತೆಗೆ ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ.  ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು , ಈ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ತಲುಪಿಸಿ ಎಂದರು.

ಜಾತಿ-ಧರ್ಮ‌ ಮಾಡೋಕೆ ಹೋಗಬಾರದು :

ಪ್ರತಿಭೆ ಯಾರ ಸೊತ್ತೂ ಅಲ್ಲ.  ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದರು.

ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ. ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ ಸಮಾಜದ,  ಎಲ್ಲಾ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

key words: CM, Siddaramaiah, promises, committee report, OPS implementation

vtu

SUMMARY: 

CM Siddaramaiah promises to discuss and decide after receiving committee report on OPS implementation.

I have duly implemented the recommendations of the Seventh Pay Commission. I will take an appropriate decision after the committee reports on the implementation of OPS. In addition, a suitable decision has also been taken regarding Arogya Sanjeevini, Chief Minister Siddaramaiah assured.

The post OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് -ഇസ്രഈല്‍ ആക്രമണത്തില്‍ മൊജ്തബ ഖാംനഇക്ക് സാരമായി പരിക്കേറ്റു; അവകാശവാദവുമായി യു.എസ് പ്രതിരോധ സെക്രട്ടറി

വാഷിങ്ടണ്‍: ഇറാന്റെ പുതിയ പരമോന്നത നേതാവ് മൊജ്തബ ഖാംനഇക്ക് യു.എസ് -ഇസ്രഈല്‍ ആക്രമണത്തില്‍...

"நடிகர் ரஜினிகாந்தை யாரும் மிரட்ட முடியாது; எந்த மிரட்டலுக்கும் அவர் அடிபணிய மாட்டார்!" – ரகுபதி

புதுக்கோட்டையில் செய்தியாளர்களை சந்தித்த அமைச்சர் ரகுபதி,"நடிகர் ரஜினிகாந்தை யாரும் மிரட்ட முடியாது....

Sachin Tendulkar: సచిన్ రిటైర్మెంట్ వెనుక ఇంత కథ ఉందా.. డ్రెస్సింగ్ రూంలోనే ప్లాన్..?

క్రికెట్ ప్రపంచంలో ‘దేవుడు’గా పిలవబడే సచిన్ టెండూల్కర్ పేరు వినగానే పరుగుల...