14
March, 2026

A News 365Times Venture

14
Saturday
March, 2026

A News 365Times Venture

ಮರು ಜಾತಿಗಣತಿ: ಜಾತಿಗಳ ನಡುವೆ ಕಂದಕವನ್ನುಂಟು ಮಾಡಿ ಬೇಳೆ ಬೇಯಿಸಿಕೊಳ್ಳಲು ಹುನ್ನಾರ- ಆರ್.ಅಶೋಕ್

Date:

ಬೆಂಗಳೂರು,ಜುಲೈ,24,2025 (www.justkannada.in):  ರಾಜ್ಯ ಸರ್ಕಾರ ಮರು ಜಾತಿಗಣತಿ ಸಮೀಕ್ಷೆಗೆ ಮುಂದಾಗಿದ್ದು ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಈ ಹುನ್ನಾರ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಜಾತಿಗಳ ನಡುವೆ ಕಂದಕ ತರಲು ಜಾತಿ ಗಣತಿ ಮಾಡಿಸಿದ್ದಾರೆ. ಈಗ ಹೊಸ ಜಾತಿ ಗಣತಿ ಸಮೀಕ್ಷೆ ಮಾಡಿಸಲು ಮುಂದಾಗಿದ್ದಾರೆ. ಇದರ ಅರ್ಥ ಈ ಹಿಂದಿನ ಗಣತಿ ಬೋಗಸ್ ಎಂದರ್ಥವಾಗುತ್ತದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಇನ್ನು ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಲೋಕಸಭೆ ಕಲಾಪದಲ್ಲಿ ವಿಪಕ್ಷಗಳ ಗದ್ದಲ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ನಮ್ಮ ಪಕ್ಷದ ಎಲ್ಲ ಸಂಸದರು ರಾಜ್ಯದ ನೆಲ, ಜಲ ವಿಚಾರವಾಗಿ ಮಾತಾಡುತ್ತಾರೆ.  ರಾಜ್ಯ ಸರ್ಕಾರ ಎಲ್ಲರಿಗೂ ಮಾರ್ಗದರ್ಶನ ನೀಡಬೇಕು. ಆದರೆ ಇದೇ ಸರ್ಕಾರದ ಪಕ್ಷದ ನಾಯಕರು ಸಂಸತ್ತಿನಲ್ಲಿ ಎಲ್ಲದಕ್ಕೂ ಸಭಾತ್ಯಾಗ ಮಾಡುತ್ತಾರೆ‌. ಸಂಸತ್ತಿನಲ್ಲಿ ರಾಜ್ಯದ ವಿಷಯವನ್ನು ಚರ್ಚೆ ಮಾಡಲು ಮುಂದಾಗಲ್ಲ ಎಂದು ಆಕ್ಷೇಪಿಸಿದರು.vtu

Key words: Re-caste census, Government, R. Ashok

The post ಮರು ಜಾತಿಗಣತಿ: ಜಾತಿಗಳ ನಡುವೆ ಕಂದಕವನ್ನುಂಟು ಮಾಡಿ ಬೇಳೆ ಬೇಯಿಸಿಕೊಳ್ಳಲು ಹುನ್ನಾರ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ ...

മൊജ്തബ ഖാംനഇ അടക്കമുള്ളവരെ കുറിച്ച് വിവരം നൽകുന്നവർക്ക് പത്ത് മില്യൺ; പാരിതോഷികം പ്രഖ്യാപിച്ച് അമേരിക്ക

വാഷിങ്ടൺ: ഇറാന്റെ പുതിയ പരമോന്നത നേതാവ് ആയത്തുല്ല മുജ്തബ ഖാംനഇ അടക്കമുള്ള...

வட கொரியா திடீர் ஏவுகணை தாக்குதல்? -'அலர்ட்' ஆகும் ஜப்பான் – என்ன நடந்தது?

ஒரு பக்கம் ஈரான் போர், உக்ரைன் போர் நடந்து கொண்டிருக்கிறது.இன்னொரு பக்கம்,...

Sabarimala Entry: శబరిమల ఆలయ ప్రవేశంపై కేరళం ప్రభుత్వ ‘యూటర్న్’.. 50 ఏళ్లలోపు మహిళలు ప్రవేశించకూడదంటూ.!

Sabarimala Entry: శబరిమల ఆలయ ప్రవేశంపై మరోమారు దుమారం రేగుతుంది. కేరళంలో...