7
March, 2026

A News 365Times Venture

7
Saturday
March, 2026

A News 365Times Venture

ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ

Date:

ಬೆಂಗಳೂರು,ಜುಲೈ,30,2025 (www.justkannada.in): ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2025ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ಮುಂದಾಗಿದ್ದು,  ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಮನವಿ ಮಾಡಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.vtu

Key words: 50% discount, books, Kannada Book Authority

The post ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ – ಸ್ಪೀಕರ್ UT ಖಾದರ್ ಕರೆ

ಮಂಗಳೂರು,ಮಾರ್ಚ್,7,2026 (www.justkannada.in): ಬಜೆಟ್ ಅಧಿವೇಶನದಲ್ಲಿ ಎಲ್ಲಾ ಎಲ್ಲ ಶಾಸಕರು ಭಾಗಿಯಾಗುವಂತೆ...

രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണം; പരാതിക്കാരി സുപ്രീം കോടതിയില്‍

ന്യൂദല്‍ഹി: ലൈംഗിക പീഡനക്കേസില്‍ പാലക്കാട് എം.എല്‍.എ രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണമെന്ന്...

Hanamkonda: హనుమకొండలో ఘోర ప్రమాదం.. టిప్పర్ ఢీకొని ఇద్దరు విద్యార్థులు మృతి

Hanamkonda: హనుమకొండ జిల్లాలో విషాదకర ఘటన చోటు చేసుకుంది. జిల్లాలోని హసన్‌పర్తి...