22
April, 2026

A News 365Times Venture

22
Wednesday
April, 2026

A News 365Times Venture

ವೈದ್ಯರು ಸಹನೆಯಿಂದ ಕೆಲಸ ಮಾಡಿ: ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು – ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಆಗಸ್ಟ್,6,2025 (www.justkannada.in):   ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ  ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು  ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೊಪ್ಪಳ ಕಾರ್ಯಕ್ರಮ  ಇಂದು ಮಳೆ ಕಾರಣದಿಂದ ತೆರಳಲಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಅನಿರೀಕ್ಷಿತ ಭೇಟಿ ನೀಡಲಾಗಿದೆ ಎಂದರು.

ಪರಿಶೀಲನೆ

ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ   ಪರಿಶೀಲಿಸಲಾಗುವುದು ಎಂದರು.

ಸರ್ಕಾರದ 108 ಆಂಬ್ಯುಲೆನ್ಸ್ ಲಭ್ಯ

ಖಾಸಗಿ ಆಂಬ್ಯುಲೆನ್ಸ್ ಅವರ ದಂಧೆ ನಡೆಯುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ  ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸರ್ಕಾರದ 108 ಆಂಬ್ಯುಲೆನ್ಸ್ ದೊರೆಯುತ್ತದೆ ಎಂದರು.

ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳು

ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ.  ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಲವಾರು ರೋಗಿಗಳನ್ನು ಭೇಟಿ ಮಾಡಿ ಮಾತನಾಡಿಸಿದೆ. ಡಾಕ್ಟರ್ ಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ, ಊಟ ಚೆನ್ನಾಗಿದೆ ಎಂದು ಹೇಳಿದರು. ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗಕ್ಕೆ ಭೇಟಿ ನೀಡಿದ್ದೇನೆಂ  ಅಂಗಾಂಗ ದಾನಕ್ಕೆ ಹೊರಗೆ 30 ರಿಂದ 40 ಲಕ್ಷ ವೆಚ್ಚವಾಗುತ್ತದೆ. ಇಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದರು.

300 ಹಾಸಿಗೆಗಳ ಆಸ್ಪತ್ರೆ: ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು

120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಸ್ಪತ್ರೆ ಊಟ ಖುದ್ದು ಪರಿಶೀಲಿಸಿದ ಸಿಎಂ

ಆಸ್ಪತ್ರೆಯಲ್ಲಿ ಸಮಸ್ಯೆಗಳು  ಕಂಡುಬರಲಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಜನರು ಸಮಸ್ಯೆಗಳನ್ನು ಹೇಳಲಿಲ್ಲ. ಕೆಲವರು ಆಸ್ಪತ್ರೆಗೆ ದಾಖಲಾಗಬೇಕೆಂದು ತಿಳಿಸಿದರು ಎಂದರು.

Key words: Doctors, patience, Victoria Hospital, CM Siddaramaiah

The post ವೈದ್ಯರು ಸಹನೆಯಿಂದ ಕೆಲಸ ಮಾಡಿ: ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು – ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മറ്റൊരു യുദ്ധമുണ്ടായാല്‍ ആക്രമിക്കാന്‍ അമേരിക്കയുടെ പക്കല്‍ ആയുധമുണ്ടാകില്ല; റിപ്പോര്‍ട്ട്

വാഷിങ്ടണ്‍: ഇറാനെതിരായ യുദ്ധത്തെത്തുടര്‍ന്ന് അമേരിക്കയുടെ മിസൈല്‍ ശേഖരത്തില്‍ വന്‍ കുറവ് രേഖപ്പെടുത്തിയതായി...

TN Assembly Elections 2026: தேர்தல் பெருவிழாவின் க்ளைமாக்ஸ்; வாக்குப்பதிவுக்குத் தயார் நிலையில் தமிழ்நாடு!

2026 சட்டமன்றத் தேர்தல்தமிழ்நாடு சட்டமன்றத் தேர்தல் வாக்குப்பதிவு நாளை காலை 7...

KTR: కాళేశ్వరంపై కాంగ్రెస్ అబద్ధాల కోటలు బద్దలయ్యాయి.. హైకోర్టు తీర్పుపై కేటీఆర్ సంచలన వ్యాఖ్యలు

కాళేశ్వరం ప్రాజెక్టు విచారణకు సంబంధించి తెలంగాణ హైకోర్టు వెలువరించిన తీర్పుపై బిఆర్ఎస్...

ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕೋರ್ಟ್ ಆದೇಶ ಹಿನ್ನೆಲೆ: ಸಿಎಂ ಜೊತೆ ಸಚಿವ ಮಧು ಬಂಗಾರಪ್ಪ ಚರ್ಚೆ

ಬೆಂಗಳೂರು,ಏಪ್ರಿಲ್,22,2026 (www.justkannada.in): ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು...