27
April, 2026

A News 365Times Venture

27
Monday
April, 2026

A News 365Times Venture

ಶಿಕ್ಷಕರ ಪದೋನ್ನತಿ, ಖಾಲಿ ಹುದ್ದೆಗಳ ಭರ್ತಿ ಕುರಿತು ಚರ್ಚೆ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಮಹತ್ವದ ಸೂಚನೆ

Date:

ಬೆಂಗಳೂರು,ಆಗಸ್ಟ್,13,2025 (www.justkannada.in): ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸುಧಾರಣೆಗಳ ಕುರಿತು ಸಭೆ ನಡೆಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನ ನೀಡಿದರು.

ಇಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ, ಸಭಾಪತಿ ಬಸವರಾಜ ಹೊರಟ್ಟಿ ಅವರ ಉಪಸ್ಥಿತಿಯಲ್ಲಿ ಸಭೆ ನಡೆಸಿ, “ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸುಧಾರಣೆ” ಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು.

ಪದವಿ ಹೊಂದಿರುವ ಪಿ.ಎಸ್.ಟಿ ಶಿಕ್ಷಕರನ್ನು ಜಿ.ಪಿ.ಟಿ ಶಿಕ್ಷಕರಾಗಿ (6-8) ಪದೋನ್ನತಿ ನೀಡುವ ಕುರಿತು, ಸ್ನಾತಕೋತ್ತರ ಪದವಿ ಹೊಂದಿದ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಉಪನ್ಯಾಸಕರ ಹುದ್ದೆಗೆ ಬಡ್ತಿ, ನೀಡುವ ಕುರಿತು, ಪದೋನ್ನತಿ ಪಡೆದ ಶಿಕ್ಷಕರಿಗೆ 15, 20 ಹಾಗೂ 25 ವರ್ಷಗಳಿಗೆ ನೀಡುವ ವೇತನ ಶ್ರೇಣಿಗಳನ್ನು ಪಡೆಯುವ ಬಗ್ಗೆ ಚರ್ಚೆ ನಡೆಯಿತು.

ಹಾಗೆಯೇ  ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ 2020ರ ವರೆಗಿನ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಮಾಡುವುದು. ಅನುದಾನಿತ ಕಾಲೇಜು ಉಪನ್ಯಾಸಕರುಗಳನ್ನು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ನಿಯೋಜನೆ ಮಾಡುವುದು, ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2006ರ ನಂತರ ನೇಮಕಗೊಂಡು ಅನುದಾನಕ್ಕೆ ಒಳಪಟ್ಟ ಸಿಬ್ಬಂದಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ಅನುದಾನಿತ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದ ಆಧಾರದ ಮೇಲೆ ಶಿಕ್ಷಕರ ವಿರುದ್ಧದ ಕ್ರಮಗಳನ್ನು ಕೈಗೊಳ್ಳದಿರುವುದು, ಅನುದಾನಿತ ಸಂಯುಕ್ತ ಪದವಿ ಕಾಲೇಜುಗಳಿಂದ ಬೇರ್ಪಟ್ಟಿರುವ ಪದವಿಪೂರ್ವ ಕಾಲೇಜುಗಳಲ್ಲಿನ ಖಾಲಿ ಹುದ್ದೆ ಭರ್ತಿ  ಮಾಡುವುದು. ಸಿ.ಬಿ.ಎಸ್.ಸಿ ಮಾದರಿಯ ಪರೀಕ್ಷಾ ಪದ್ಧತಿಯನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು.

Lesson Based Assessment ಪದ್ಧತಿಯನ್ನು ಪುನರ್ ಪರಿಶೀಲಿಸುವುದು ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ 1997-98 ಮತ್ತು 1998-99ರಲ್ಲಿ ನೇಮಕಾತಿ ಹೊಂದಿ ಕರ್ತವ್ಯಕ್ಕೆ ಹಾಜರಾಗಿರುವ ಕೃಪಾಂಕ ರಹಿತ ಪ್ರೌಢಶಾಲಾ ಶಿಕ್ಷಕರಿಗೆ, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನುಷ್ಠಾನಗೊಳಿಸಿದಂತೆ ಸೇವಾ ಹಿರಿತನ ಹಾಗೂ ವೇತನ ಪರಿಷ್ಕರಣೆ ಮಾಡುವ ಕುರಿತು, ಕಟ್ಟಡ ಶಿಥಿಲಗೊಂಡಿರುವ, ಖಾಸಗಿ ಅನುದಾನ ರಹಿತ ಶಾಲೆಯನ್ನು ಕನಿಷ್ಠ 2 ವರ್ಷಗಳ ಕಾಲ ತಾತ್ಕಾಲಿಕವಾಗಿ ಸ್ಥಳಾಂತರಿಸುವುದು ಸೇರಿದಂತೆ ಇನ್ನೂ ಹಲವು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ ಅಗತ್ಯ ಸಲಹೆಗಳನ್ನು ಪಡೆದು, ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ  ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದರು.

ಸಭೆಯಲ್ಲಿ ವಿಧಾನಪರಿಷತ್ ನ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರದ ಶಾಸಕರುಗಳಾದ  ಕೆ. ವಿವೇಕಾನಂದ, ಮಧು ಮಾದೇಗೌಡ, ನಮೋಶಿ,  ಎಸ್.ಎಲ್ ಭೋಜೇಗೌಡ,  ಎಸ್.ವಿ ಸಂಕನೂರು,  ಪುಟ್ಟಣ್ಣ,  ಧನಂಜಯ್ ಸರ್ಜಿ,  ಹನಮಂತ ಆರ್ ನಿರಾಣಿ, ರಾಮೋಜಿ ಗೌಡ,  ಡಿ.ಟಿ ಶ್ರೀನಿವಾಸ್,  ಹಾಗೂ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ತ್ರಿಲೋಕ ಚಂದ್ರ ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Key words: Discussion, Education Department, Minister, Madhu Bangarappa

The post ಶಿಕ್ಷಕರ ಪದೋನ್ನತಿ, ಖಾಲಿ ಹುದ್ದೆಗಳ ಭರ್ತಿ ಕುರಿತು ಚರ್ಚೆ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಮಹತ್ವದ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

CM Revanth Reddy : BRS ఒక చచ్చిపోయిన శవం.. దానికి భవిష్యత్తు లేదు

CM Revanth Reddy : ముఖ్యమంత్రి రేవంత్ రెడ్డి బీఆర్ఎస్ పార్టీపై...

ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ  ಸಿಗಬೇಕು...

ആന്റണി രാജുവിന് തിരിച്ചടി; തൊണ്ടിമുതൽ തിരിമറിക്കേസിൽ ശിക്ഷ തടയണമെന്ന ആവശ്യം തള്ളി സുപ്രീം കോടതി

ന്യൂദൽഹി: തൊണ്ടിമുതൽ തിരിമറിക്കേസിൽ ശിക്ഷ തടയണമെന്ന് ആവശ്യപ്പെട്ട് മുൻ മന്ത്രി ആന്റണി...

மதுபான வழக்கு: "இந்த நீதிபதி முன் ஆஜராக மாட்டேன், அதற்கு பதில்.!"- கெஜ்ரிவால் வெளியிட்ட வீடியோ

டெல்லி மதுபானக் கொள்கை முறைகேடு தொடர்பாக சிபிஐ (CBI) பதிவு செய்த...