5
March, 2026

A News 365Times Venture

5
Thursday
March, 2026

A News 365Times Venture

ದಸರಾ ಆಚರಣೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ- DC ಲಕ್ಷ್ಮೀಕಾಂತ ರೆಡ್ಡಿ

Date:

ಮೈಸೂರು ಅಗಸ್ಟ್, 26,2025 (www.justkannada.in): ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನ ಸಂದಣಿ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಕುರಿತಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಲಕ್ಷ್ಮೀಕಾಂತರೆಡ್ಡಿ ಅವರು ಮಾತನಾಡಿದರು. ದಸರಾ ಆಚರಣೆ ಯುವ ಸಂಭ್ರಮ, ಯುವ ದಸರಾ, ಅರಮನೆ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಸರಾ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ, ಸಮಯ, ಕಾರ್ಯಕ್ರಮದ ವಿವರಗಳ ಮಾಹಿತಿಯನ್ನು ಆಗಾಗ್ಗೆ ಸಾರ್ವಜನಿಕರಿಗೆ ನೀಡಬೇಕು. ಜನಸಂದಣಿ ಆಗದಂತೆ ಅಗತ್ಯ ಸೂಚನೆಗಳನ್ನು ಆಗಾಗ್ಗೆ ಸಾರ್ವಜನಿಕರಿಗೆ ನೀಡುತ್ತಿರಬೇಕು. ಜನಸಂದಣಿ ಇರುವ ಪ್ರದೇಶಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನಸಂದಣಿ ಉಂಟಾಗದಂತೆ ಪೋಲಿಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿ ಸಿ ಪಿ ಬಿಂದುಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Mysore dasara, precautions, DC, Lakshmikanta Reddy

The post ದಸರಾ ಆಚರಣೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ- DC ಲಕ್ಷ್ಮೀಕಾಂತ ರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്റെ ഉള്ളില്‍ ആഗ്രഹമുണ്ടായിരുന്നു; രാജ്യസഭാ സ്ഥാനാര്‍ത്ഥിത്വം സ്ഥിരീകരിച്ച് നിതീഷ് കുമാര്‍

പാട്‌ന: രാജ്യസഭാ തെരഞ്ഞെടുപ്പില്‍ മത്സരിക്കുമെന്ന റിപ്പോര്‍ട്ടുകള്‍ സ്ഥിരീകരിച്ച് ബീഹാര്‍ മുഖ്യമന്ത്രി നിതീഷ്...

Spain: ஈரான் போரில் அமெரிக்காவிற்கு 'நோ' சொல்லும் ஒரே ஐரோப்ப நாடு – காரணமோ 'சூப்பர்'

'நாங்கள்... நாங்கள்' என்று பிரிட்டன், பிரான்ஸ், ஜெர்மனி ஆகிய ஐரோப்ப நாடுகள்...

Naga Chaitanya: కార్తీక్ దండుపై ప్రశంసల వర్షం కురిపించిన నాగచైతన్య..

యువసామ్రాట్ నాగచైతన్య నటించిన లేటెస్ట్ మిథికల్ థ్రిల్లర్ ‘వృషకర్మ’ (Vrushakarma) ఫస్ట్...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು...