ಮಂಗಳೂರು,ಆಗಸ್ಟ್,28,2025 (www.justkannada.in): ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.
ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದು ಮಗು ಸೇರಿ ಮೂವರು ಮಹಿಳೆಯರು ಓರ್ವ ಪುರುಷ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಎಸ್ ಆರ್ ಟಿಸಿ ಬಸ್ ನ ಬ್ರೇಕ್ ಫೇಲ್ ಆಗಿ ಬಸ್ ಆಟೋಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
Key words: KSRTC, bus, collides, auto, Five ,Dead
The post ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





