25
April, 2026

A News 365Times Venture

25
Saturday
April, 2026

A News 365Times Venture

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Date:

ಬೆಂಗಳೂರು,ಆಗಸ್ಟ್,28,2025 (www.justkannada.in) :ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ದಿನಾಂಕ: 22.08.2025 ರಂದು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು.

ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ದಿನಾಂಕ: 01.09.2025 ರ ಸಂಜೆ 5.00 ಘಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಈ ಮೂಲಕ ಪ್ರಕಟಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ,ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ,  ವಸಂತ ನಗರ,ಬೆಂಗಳೂರು ಅಥವಾ kscbcb@gmail.com  ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ.ಹೆಚ್ಚಿನ‌ವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Key words: Social Educational Survey,  Expansion, period, information

The post ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യസഭാ അംഗങ്ങളുടെ കൂറുമാറ്റം; എം.പിമാരെ അയോഗ്യരാക്കണമെന്ന് ആം ആദ്മി

ന്യൂദൽഹി: രാഘവ് ഛദ്ദ ഉൾപ്പെടെ ആം ആദ്മി പാർട്ടിയുടെ ഏഴ് രാജ്യസഭാ...

"ராஜிவ் கொலையில் திமுகவுக்குச் சம்பந்தம் என்பதால்தான்…" – ராகுல் குறித்து சி.டி.ஆர் நிர்மல் குமார்

தவெகவின் இணைப் பொதுச்செயலாளரும் திருப்பரங்குன்றம் தொகுதி வேட்பாளருமான சி.டி.ஆர்.நிர்மல் குமார் சென்னை...

AAP Crisis: ‘‘పంజాబ్ ద్రోహి’’ అంటూ హర్భజన్ సింగ్ ఇంటిపై ఆప్ దాడి…

AAP Crisis: రాఘవ్ చద్దాతో సహా ఏడుగురు రాజ్యసభ ఎంపీలు బీజేపీ...

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ...