5
March, 2026

A News 365Times Venture

5
Thursday
March, 2026

A News 365Times Venture

ಧರ್ಮಸ್ಥಳ ಕ್ಷೇತ್ರ ವಿವಾದ ಕೇಂದ್ರವನ್ನಾಗಿಸಲು ಯತ್ನಿಸುತ್ತಿರುವುದು ವಿಷಾದನೀಯ-ಸುತ್ತೂರು ಶ್ರೀಗಳು

Date:

ಮೈಸೂರು,ಆಗಸ್ಟ್,29,2025 (www.justkannada.in): ನಾಡಿನ ಪ್ರಸಿದ್ಧ ಶ್ರದ್ಧೆ ಹಾಗೂ ಭಕ್ತಿಯ ಧಾರ್ಮಿಕ ಕೇಂದ್ರಗಳಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರವೂ ಒಂದು. ಇಂದು ಕ್ಷೇತ್ರವನ್ನು ವಿವಾದಿತ ಕೇಂದ್ರವನ್ನಾಗಿಸಲು ಕೆಲವರು ಯತ್ನಿಸುತ್ತಿರುವುದು ವಿಷಾದನೀಯ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಧರ್ಮಸ್ಥಳ ಪ್ರಕರಣ, ಅಪಪ್ರಚಾರ ಆರೋಪ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸುತ್ತೂರು ಶ್ರೀಗಳು,  ನಂಬಿಕೆ ಎಂಬುದು ಬಹು ಸೂಕ್ಷ್ಮವಾದ ಸಂಗತಿ. ಅದು ಕನ್ನಡಿಯಿದ್ದಂತೆ. ಒಮ್ಮೆ ಅದು ಒಡೆದು ಹೋದರೆ ಮತ್ತೆ ಸರಿಪಡಿಸಲಾಗುವುದಿಲ್ಲ. ಒಡೆದ ಕನ್ನಡಿಯ ಪ್ರತಿಚೂರಿನಲ್ಲೂ ಪ್ರತ್ಯೇಕ ಪ್ರತ್ಯೇಕ ಬಿಂಬಗಳು ಕಾಣುತ್ತಿರುತ್ತವೆ. ಹೀಗೆ ಕಂಡ ಕಂಡ ಬಿಂಬಗಳನ್ನೆಲ್ಲ ನಂಬಿ ವಿಭಿನ್ನವಾಗಿ ಅರ್ಥೈಸುತ್ತಾ ಹೋಗುವುದು ಸೂಕ್ತವಾದುದಲ್ಲ. ಒಂದು ಧಾರ್ಮಿಕ ಕ್ಷೇತ್ರದ ಮೇಲೆ ನಿರಂತರವಾಗಿ ಒಂದಲ್ಲ ಒಂದು ವಿವಾದವನ್ನು ಮುನ್ನೆಲೆಗೆ ತರುತ್ತಿರುವ ಪ್ರಯತ್ನಗಳು ಸೂಕ್ತವಾದುವಲ್ಲ ಎಂದಿದ್ದಾರೆ.

ಶ್ರೀ ಧರ್ಮಸ್ಥಳ ಕ್ಷೇತ್ರ ಕರ್ನಾಟಕ ಮಾತ್ರವಲ್ಲದೇ ಇಡೀ ಭಾರತದ, ಜಗತ್ತಿನ ಅನೇಕ ಭಾಗಗಳ ಪರಂಪರಾಗತ ಸಹಬಾಳ್ವೆಗೆ ದ್ಯೋತಕ. ಅಲ್ಲಿ ಶಿವ ದೇವಾಲಯದಲ್ಲಿ ಪೂಜಿಸುವ ಅರ್ಚಕರು ವಿಷ್ಣುವನ್ನೇ ಪರಮ ದೈವವೆಂದು ನಂಬುವ ಮಾಧ್ವ ಸಂಪ್ರದಾಯದವರು. ಉಸ್ತುವಾರಿ ನೋಡಿಕೊಳ್ಳುತ್ತಿರುವವರು ಶ್ರಮಣ ಧರ್ಮದ ಜೈನ ಸಮುದಾಯದವರು. ಈ ಮೂರು ವಿಭಿನ್ನ ನಂಬಿಕೆಗಳು ಒಗ್ಗೂಡಿರುವ ಶ್ರೀಕ್ಷೇತ್ರದ ಮೂಲ ದೈವಕ್ಕೆ ಹೆಗ್ಗಡೆ ಕುಟುಂಬದ ಪರಂಪರೆಯವರೆಲ್ಲರೂ ಶ್ರದ್ಧಾ-ಭಕ್ತಿಗಳಿಂದ ನಡೆದುಕೊಳ್ಳುತ್ತಿರುವುದು ಹಾಗೂ ಯಾವುದೇ ಚ್ಯುತಿಬಾರದಂತೆ ನಿರ್ವಹಿಸುತ್ತಿರುವುದು ಹೆಮ್ಮೆ ಪಡುವ ವಿಚಾರ. ಇದು ಭಾವೈಕ್ಯತೆಗೆ ನಿಜವಾದ ತೋರುಗನ್ನಡಿ.

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಅವರು “ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ”ಯ ಮೂಲಕ ಗ್ರಾಮೀಣ ಜನರ ಬದುಕನ್ನು ಸಮೃದ್ಧಗೊಳಿಸಲು ಹಮ್ಮಿಕೊಂಡಿರುವ ಕಾರ್ಯಗಳು ಅಪೂರ್ವವಾದುವು. ಗ್ರಾಮಗಳಿಗೆ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತಿರುವರು. ದೇವಾಲಯಗಳ ಜೀಣೋದ್ಧಾರ ಕೈಗೊಳ್ಳುತ್ತಿರುವರು. ಮಂಜೂಷಾ ವಸ್ತುಸಂಗ್ರಹಾಲಯದ ಮೂಲಕ ಪ್ರಾಚೀನ ವಸ್ತುಗಳು, ಸ್ಮರಣಿಕೆಗಳು ಹಾಗೂ ಹಸ್ತಪ್ರತಿಗಳ ಸಂಗ್ರಹ ಮತ್ತು ಪ್ರದರ್ಶನ ವ್ಯವಸ್ಥೆ ಮಾಡಿರುವರು. ಸ್ತ್ರೀಶಕ್ತಿ ಸಂಘಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಭದ್ರತೆಯನ್ನು ಹೆಚ್ಚಿಸಿ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕನ್ನು ಕಲ್ಪಿಸುತ್ತಿರುವರು. 1972 ರಿಂದಲೂ ಸಾಮೂಹಿಕ ವಿವಾಹಗಳನ್ನು ನಡೆಸುವ ಮೂಲಕ ಶ್ರೀಸಾಮಾನ್ಯರು ಆಡಂಬರದ ಆಚರಣೆಗಳಿಂದ ಅನುಭವಿಸುತ್ತಿದ್ದ ಆರ್ಥಿಕ ತೊಂದರೆಯಿಂದ ಮುಕ್ತರನ್ನಾಗಿರಿಸಿರುವುದು ಅನುಕರಣೀಯ ಎಂದು ನುಡಿದ್ದಾರೆ.

ಇಂತಹ ಪವಿತ್ರ ಕ್ಷೇತ್ರದ ಪರಿಸರದಲ್ಲಿ ನಡೆದ ಕೆಲವು ಅಸಹಜ ಸಾವಿನ ಪ್ರಕರಣಗಳು ಗಂಭೀರವಾದುವೇ ಆಗಿರಬಹುದು. ಆದರೆ ಇಂತಹ ಪ್ರಕರಣಗಳನ್ನು ಶ್ರೀಕ್ಷೇತ್ರದೊಂದಿಗೆ ತಳಕು ಹಾಕಲು ಪ್ರಯತ್ನಿಸುವುದು ದುಡುಕಿನ  ನಿರ್ಧಾರವಾಗುತ್ತದೆ. ಸತ್ಯ  ಸದಾ ಮೌನಿ, ಸುಳ್ಳಿಗೆ ಆರ್ಭಟ ಜಾಸ್ತಿ. ಇದರಿಂದ ಶ್ರದ್ಧಾವಂತ ಮನಸ್ಸುಗಳಿಗೆ ಧಕ್ಕೆಯುಂಟಾಗಬಾರದು. ಇಂಥ ಕೃತ್ಯಗಳನ್ನು ಸಮಗ್ರವಾಗಿ ತನಿಖೆ ಮಾಡಿ ಸತ್ಯವನ್ನು ಅನಾವರಣ ಮಾಡಬೇಕಾದುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅದಕ್ಕಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಶ್ರೀಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಮತ್ತು ಶ್ರದ್ಧೆಯನ್ನು ಹೊಂದಿರುವ ಸದ್ಭಕ್ತರು ಶಾಂತಿ ಮತ್ತು ಸಂಯಮದಿಂದ ಇರಬೇಕಾದುದು ಅಗತ್ಯ. ಹಾಗೆಯೇ ನ್ಯಾಯಕ್ಕಾಗಿ ಆಗ್ರಹಿಸುವವರು ಕೂಡ ಯಾವುದೇ ಪೂರ್ವಾಗ್ರಹಗಳಿಗೆ ಒಳಗಾಗದೆ ತನಿಖೆ ಪೂರ್ಣವಾಗುವವರೆಗೆ ಅಸಹನೆಗೊಳ್ಳದೆ ತಾಳ್ಮೆಯಿಂದ ಇರಬೇಕಾದುದೂ ಅಗತ್ಯ. ಯಾವುದನ್ನೇ ಆಗಲಿ ಒಡೆಯುವುದು ಸುಲಭ, ಕಟ್ಟುವುದು ಕಷ್ಟ ಎಂಬುದನ್ನು ಎಲ್ಲರೂ ಅರಿಯಬೇಕು. ಸರ್ಕಾರ ಆದಷ್ಟು ಶೀಘ್ರವಾಗಿ ಕೂಲಂಕುಷವಾಗಿ ತನಿಖೆ ನಡೆಸಿ ಸತ್ಯವನ್ನು ಪತ್ತೆ ಹಚ್ಚಬೇಕು ಎಂದು ಸುತ್ತೂರು ಶ್ರೀಗಳು ಆಗ್ರಹಿಸಿದ್ದಾರೆ.

ಅನೇಕ ಭಕ್ತರಿಗೆ ಇಂತಹ ಪ್ರಸಂಗಗಳು ಏಕೆ ಎದುರಾಗುತ್ತವೆ ಎಂಬ ಪ್ರಶ್ನೆ ಮನಸ್ಸಿನಲ್ಲಿ ಮೂಡವುದು ಸಹಜ. ಇದೆಲ್ಲ ಭಗವಂತನ ಲೀಲೆ ಎಂದು ತಿಳಿಯುವುದು ಸೂಕ್ತ. “ತೇನ ವಿನಾತೃಣಮಪಿ ನಚಲತಿ” ಎಂಬಂತೆ ಭಗವಂತನ ಲೀಲೆಯಲ್ಲದಿದ್ದರೆ ಇಂಥದ್ದೆಲ್ಲ ಸಂಭವಿಸುವುದಿಲ್ಲ. ಸತ್ಯ ತನ್ನ ಪ್ರಖರತೆಯನ್ನು ಕಂಡು ಕೊಳ್ಳಲು ಇದೂ ಸಹ ಒಂದು ಸಾಧನವಾಗಿರಲೂ ಬಹುದು!

ಇಂಥ ಘಟನೆಗಳಿಂದ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಅವರ ಕುಟುಂಬವರ್ಗದವರು, ಶ್ರೀಕ್ಷೇತ್ರದ ಸೇವಾಕರ್ತರು, ಭಕ್ತಾದಿಗಳು ಹಾಗೂ ಅಭಿಮಾನಿಗಳು ವಿಚಲಿತರಾಗದೆ, ಧೈರ್ಯ ಹಾಗೂ ಸಮಾಧಾನಗಳಿಂದಿದ್ದು, ಶ್ರೀಕ್ಷೇತ್ರದ ಎಲ್ಲ ಧಾರ್ಮಿಕ ಚಟುವಟಿಕೆಗಳನ್ನು ಎಂದಿನಂತೆ ಮುಂದುವರಿಸಿಕೊಂಡು ಹೋಗುತ್ತಿರಬೇಕು. ಇಂಥ ಸೂಕ್ಷ್ಮ ಸಂದರ್ಭಗಳಲ್ಲಿ ಎಲ್ಲರೂ ಅವರೊಂದಿಗೆ ಒಟ್ಟಾಗಿದ್ದು ಕ್ಷೇತ್ರದ ಸಂರಕ್ಷಣೆಗೆ ಸಹಕರಿಸಬೇಕಾದುದು ಅತ್ಯಗತ್ಯ. ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಆದಷು ಜಾಗ್ರತೆ ಎಲ್ಲ ಕಾರ್ಮೋಡಗಳು ಕರಗಿ ಶಾಂತಿ-ನೆಮ್ಮದಿಗಳು ನೆಲೆಸುವಂತಾಗಲಿ ಎಂದು ಸುತ್ತೂರು ಶ್ರೀಗಳು ಹಾರೈಸಿದ್ದಾರೆ.

Key words: Dharmasthala case, controversy, Mysore, Suttur Shri

The post ಧರ್ಮಸ್ಥಳ ಕ್ಷೇತ್ರ ವಿವಾದ ಕೇಂದ್ರವನ್ನಾಗಿಸಲು ಯತ್ನಿಸುತ್ತಿರುವುದು ವಿಷಾದನೀಯ-ಸುತ್ತೂರು ಶ್ರೀಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು...

ഇസ്രഈലിന്റെ പാവയായ ട്രംപിൽ നിന്നും അമേരിക്കയെ തിരിച്ചുപിടിക്കാൻ ആഹ്വാനം ചെയ്ത് ഇറാഖ് നേതാവ്

ബാഗ്‌ദാദ്‌: ഇസ്രഈലിന്റെ കയ്യിലെ പാവയായ അമേരിക്കൻ പ്രസിഡന്റ് ഡൊണാൾഡ് ട്രംപിൽ നിന്നും...

“ஃபினிஷ்' அந்த கை சைகையை நான் திட்டமிட்டு செய்யவில்லை.!' – முதல்வர் ஸ்டாலின் விளக்கம்

திமுக - காங்கிரஸ் கூட்டணியின் தொகுதி பங்கீடு ஒப்பந்தத்தை நேற்று (மார்ச்.5)...

Sonu Sood: రంగంలోకి హీరో సోనూసూద్.. దుబాయ్‌లో చిక్కుకున్న వారికి ఉచిత వసతి!

పశ్చిమాసియాలో నెలకొన్న యుద్ధ పరిస్థితుల కారణంగా అంతర్జాతీయ విమాన సర్వీసులు రద్దయిన...