13
March, 2026

A News 365Times Venture

13
Friday
March, 2026

A News 365Times Venture

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ : ಕರ್ನಾಟಕ ಪಬ್ಲಿಕ್ ಶಾಲೆ ನೂತನ ಕಟ್ಟಡ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತು

Date:

ಮೈಸೂರು,ಸೆಪ್ಟೆಂಬರ್ ,1,2025 (www.justkannada.in):  ಊರಿನ ಋಣ ಯಾವಾಗಲೂ ನನ್ನ ಮೇಲೆ  ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದರು.‌

ನನ್ನ ಊರಿನ ಶಾಲೆಯಲ್ಲಿ  ನಾನು ಐದರಿಂದ ಏಳರವರೆಗೆ  ಓದಿದ ಶಾಲೆಯನ್ನು  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ  ದತ್ತು ಪಡೆದಿದೆ.  ಶಿಕ್ಷಣ ಇಲಾಖೆಯ ಸಹಯೋಗದಲ್ಲಿ  ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ.  ಈ ಕಟ್ಟಡವನ್ನು  ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು

ಪ್ರಾರ್ಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಇಲ್ಲಿ ನಡೆಯುತ್ತಿದೆ. ಪದವಿ ಕಾಲೇಜಿಗೆ ವಿದ್ಯಾರ್ಥಿಗಳು ದೊರೆಯುವುದಿಲ್ಲ ಎಂದು ಪದವಿ ಕೋರ್ಸು ತೆರೆದಿಲ್ಲ ಎಂದರು.  ಆದರೆ ಊರಿನಲ್ಲಿ ಇತರೆ ಸೌಲಭ್ಯಗಳಾದ  ಬಿಸಿಎಂ ವಿದ್ಯಾರ್ಥಿ ನಿಲಯ, ಪಶು ಚಿಕಿತ್ಸಾ ಕೇಂದ್ರ , ಗ್ರಂಥಾಲಯ,  ಸಮುದಾಯ ಆರೋಗ್ಯ ಕೇಂದ್ರಗಳು ಇವೆ ಎಂದರು.  ಸರ್ಕಾರದ ಅಭಿವೃದ್ಧಿಯನ್ನು ಕಾಣದಿರುವ  ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದರು.

ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ: ರಾಜಕೀಯ ಲಾಭ ಸಿಗುವುದಿಲ್ಲ

ಬಿಜೆಪಿಯವರು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,  ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ  ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ  ಎಂದರು.

ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ.

ಮೈಸೂರಿಗೂ ಚಾಮುಂಡಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರು ಹಿಂದುತ್ವ ಗಟ್ಟಿಯಾಗುತ್ತದೆ, ಹಿಂದೂಗಳೆಲ್ಲ ಒಟ್ಟಾಗುತ್ತಾರೆ  ಎಂದು ತಿಳಿದಿದ್ದಾರೆ. ನಾನೂ ಕೂಡ ಹಿಂದೂವೇ. ನಮ್ಮೂರಿನಲ್ಲಿ ನಾವು ರಾಮಮಂದಿರ ಕಟ್ಟಿಲ್ಲವೇ? ಎಂದು ಪ್ರಶ್ನಿಸಿದರು. ಹಿಂದುಗಳೆಂದರೆ ರಾಜಕೀಯ,  ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು. ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ ಎಂದರು.

ಬಾನು ಮುಷ್ತಾಕ್ ಅವರಿಗೆ  ಉದ್ಘಾಟನೆಗೆ ಆಹ್ವಾನ

ಬಾನು ಮುಷ್ತಾಕ್ ಅವರಿಗೆ  ಬುಕರ್ ಪ್ರಶಸ್ತಿ ದೊರಕಿದ್ದು, ಎಷ್ಟು ಜನಕ್ಕೆ ಈ ಪ್ರಶಸ್ತಿ ಲಭಿಸಿದೆ ಎಂದ ಮುಖ್ಯಮಂತ್ರಿಗಳು, ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಅವಕಾಶ ನೀಡಲಾಗಿದೆ ಎಂದವರು.

ದಸರಾ ಮೇಲೆ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ

ಯಾವುದೇ  ದಸರಾ ಹಬ್ಬದ ಮೇಲೆ ಈ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯೇ ಇರಬಹುದು. ದಸರಾ ಹಬ್ಬ ನಾಡ ಹಬ್ಬವಲ್ಲವೇ?  ನಾಡ ಹಬ್ಬ ಎಂದರೆ ಎಲ್ಲರೂ ಸೇರಿ ಮಾಡುವುದು. ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರು, ಬೌದ್ಧರು ಸೇರಿ ಆಚರಿಸುವ ಹಬ್ಬ ಎಂದರು.

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ವಿಷಯ ಇರುವುದು ಚಾಮುಂಡಿ ಬೆಟ್ಟದ್ದಲ್ಲ, ದಸರಾ ಹಬ್ಬದ್ದು ಎಂದರು.

ಸಚಿವರಾದ ವೆಂಕಟೇಶ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Mysore, CM Siddaramaiah, inaugurated , Karnataka Public School

The post ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ : ಕರ್ನಾಟಕ ಪಬ್ಲಿಕ್ ಶಾಲೆ ನೂತನ ಕಟ್ಟಡ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ധനക്ഷാമമില്ല, എല്‍.പി.ജി ഉത്പാദനം 28% വര്‍ധിപ്പിച്ചു; വ്യാജപ്രചരണം വേണ്ട: ഹര്‍ദീപ് സിങ്

ന്യൂദല്‍ഹി: ഇന്ത്യയിലെ ഊര്‍ജ ഇറക്കുമതി സുരക്ഷിതമായി തുടരുകയാണെന്ന് പെട്രോളിയം മന്ത്രി ഹര്‍ദീപ്...

சென்னை ரயில் நிலையங்களில் இந்தி எழுத்துகள் அழிப்பு போராட்டத்தில் மே 17 இயக்கத்தினர்!

தமிழ்நாட்டில் இந்தி திணிப்புக்கு எதிராக தொடர்ந்து குரல் எழுப்பப்பட்டு வருகிறது. அந்தவகையில்...

Lifetime Achievement Award: ‘ది వాల్’ రాహుల్ ద్రావిడ్ కు అరుదైన గౌరవం..

Lifetime Achievement Award: భారత మాజీ క్రికెటర్, మాజీ టీమిండియా కోచ్,...

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ,...