16
May, 2026

A News 365Times Venture

16
Saturday
May, 2026

A News 365Times Venture

ದಸರಾ ಚಲನಚಿತ್ರೋತ್ಸವ: ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ

Date:

ಮೈಸೂರು,ಸೆಪ್ಟಂಬರ್,18,2025 (www.justkannada.in):  ಮೈಸೂರು ದಸರಾ ಮಹೋತ್ಸವ – 2025ರ ಹಿನ್ನೆಲೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಕಿರುಚಿತ್ರಗಳಿಗೆ  ಗುರುವಾರ  ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುತನ್ ನಿರ್ದೇಶನದ ಲಕುಮಿ ಕಿರುಚಿತ್ರಕ್ಕೆ ಪ್ರಥಮ ಬಹುಮಾನ ಹಾಗೂ 20 ಸಾವಿರ ರೂ.ಗಳ ಗೌರವಧನ, ಮಣಿಕಂಠ ನಿರ್ದೇಶನದ ಹಿಂಬಾಲಿಸು ಚಿತ್ರಕ್ಕೆ ಎರಡನೇ ಬಹುಮಾನ ಹಾಗೂ 15 ಸಾವಿರ ರೂ.ಗಳ ಗೌರವಧನ ಮತ್ತು ಶಶಿಕುಮಾರ್ ಡಿ ಎಸ್ ನಿರ್ದೇಶನದ ಹಬ್ಬದ ಹಸಿವು ಚಿತ್ರಕ್ಕೆ ಮೂರನೇ ಬಹುಮಾನ ಹಾಗೂ 10 ಸಾವಿರ ರೂ.ಗಳ ಗೌರವಧನ ನೀಡಲಾಯಿತು.

ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಲಕುಮಿ ಹಾಗೂ ಅತ್ಯುತ್ತಮ  ಸಂಕಲನಕಗಾರ ವಿಭಾಗದಲ್ಲಿ ಹಿಂಬಾಲಿಸು ಕಿರುಚಿತ್ರಕ್ಕೆ ಪ್ರಶಸ್ತಿ ದೊರೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಿರುತೆರೆ ನಟಿ ದೀಪಾ ರವಿಶಂಕರ್ ಅವರು ಮಾತನಾಡಿ,  ಪ್ರಶಸ್ತಿ ಸಿಗದವರು ಬೇಸರಗೊಳ್ಳಬೇಡಿ, ಕಡಿಮೆ ಸಮಯದಲ್ಲಿ ಒಂದು ಸಂದೇಶ ಸಾರುವ ಕಿರುಚಿತ್ರ ಮಾಡುವುದು ಕಮರ್ಷಿಯಲ್ ಸಿನಿಮಾಗಿಂತ ಕಷ್ಟಕರ ಹಾಗೂ ಇದಕ್ಕೆ ಶ್ರಧ್ದೆ ಬಹಳ ಮುಖ್ಯವಾಗಿರುತ್ತದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಇನ್ನೂ ಹೆಚ್ಚೆಚ್ಚು ಕಿರುಚಿತ್ರಗಳನ್ನು ಮಾಡಿ  ಎಂದು ಹೊಸಬರಿಗೆ ಸಲಹೆ ನೀಡಿದರು.

ಈ ವೇಳೆ ಮುಖ್ಯ ಅತಿಥಿಗಳಾದ ಕಿರುತೆರೆ ನಟಿ ದೀಪಾ ರವಿಶಂಕರ್ , ಕಿರುತೆರೆ ನಟ ಅಶ್ವಿನ್ ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಅಶ್ವತ್ ನಾರಾಯಣ ಅವರನ್ನು ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಚಲನಚಿತ್ರ ಉಪ ಸಮಿತಿ ಉಪ ಅಧ್ಯಕ್ಷರಾದ ಸಿದ್ಧರಾಜು, ವಿಶೇಷಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್, ತೀರ್ಪುಗಾರರಾದ ಕಾವಾ ಕಾಲೇಜಿನ ಪ್ರಾಧ್ಯಾಪಕರಾದ ಚರಿತಾ, EMMRC ತಂತ್ರಜ್ಞರಾದ ಗೋಪಿನಾಥ್ ಹಾಗೂ ಉಪ ಸಮಿತಿ ಉಪಾಧ್ಯಕ್ಷರು ಮತ್ತು ಸದಸ್ಯರು ಇದ್ದರು.

Key words: Dasara, Film Festival, Awards,  short films

The post ದಸರಾ ಚಲನಚಿತ್ರೋತ್ಸವ: ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാഹുൽ ഗാന്ധിയുടെ വിദേശയാത്രകളിൽ ദുരൂഹത; സാമ്പത്തിക സ്രോതസ്സ് വെളിപ്പെടുത്തണമെന്ന് കിരൺ റിജിജു

ന്യൂദൽഹി: കോൺഗ്രസ് നേതാവും ലോക്‌സഭാ എം.പിയുമായ രാഹുൽ ഗാന്ധിയുടെ വിദേശയാത്രകളെയും അതിനായി...

'ஆயிரம் கோடிக்கணக்கில் இந்தியாவில் இருந்து வெளியேறும் பணம்' இந்திய ரூபாய் மதிப்பு ரூ.96-க்கு சரிவு!

அமெரிக்க டாலருக்கு எதிரான இந்திய ரூபாயின் மதிப்பு தொடர்ந்து வீழ்ச்சியடைந்துகொண்டே வருகிறது....

Shocking Love Story: ముసలోడికి దసరా పండగ.. 22 ఏళ్ల యువతితో పెళ్లి చేసిన గ్రామస్తులు..

Shocking Love Story: బీహార్ లోని కతిహార్‌లో ఒక లవ్ స్టోరీ...