ಬೆಂಗಳೂರು,ಅಕ್ಟೋಬರ್,8,2025 (www.justkannada.in): ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಮೇಲೆ ವಕೀಲ ಶೂ ಎಸೆಯಲು ಯತ್ನಿಸಿದ ಘಟನೆ ಖಂಡನೀಯ. ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದು ತಿಳಿಸಿದರು.
“ಜಾಲಿವುಡ್ ಸ್ಟುಡಿಯೋ ಬಂದ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಮಾಲಿನ್ಯ ನಿಯಮಗಳನ್ನು ಪಾಲಿಸಿಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿತ್ತು. ಅದರ ಆದೇಶದಂತೆ ಈಗ ಕ್ರಮ ತೆಗೆದುಕೊಳ್ಳಲಾಗಿದೆ. ಅಧಿಕಾರಿಗಳು ಕಾನೂನಾತ್ಮಕವಾಗಿ ಕೆಲಸ ಮಾಡಿದ್ದಾರೆ ಎಂದರು.
Key words: Shoe, CJI, DCM, DK Shivakumar, action
The post ಸಿಜೆಐ ಮೇಲೆ ಶೂ ಎಸೆತ: ತಪ್ಪಿತಸ್ಥನ ವಿರುದ್ದ ಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





