26
September, 2026

A News 365Times Venture

26
Saturday
September, 2026

A News 365Times Venture

ನೇರ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ: ಸಂಪುಟ ಸಭೆಯಲ್ಲಿ ಅನುಮೋದನೆ

Date:

ಬೆಂಗಳೂರು,ಅಕ್ಟೋಬರ್,9,2025 (www.justkannada.in): ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ3 ವರ್ಷ ವಯೋಮಿತಿ ಸಡಿಲಿಕೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ದೊರೆತಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ರೂ.405.55 ಕೋಟಿ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2025 ಅನುಮೋದನೆ ನೀಡಲಾಗಿದೆ. 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ವಿಸ್ತರಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಅನುಮೋದನೆ ನವೆಂಬರ್ ತನಕ ಅವಧಿ ವಿಸ್ತರಣೆ ಮಾಡಲಾಗಿದೆ.

2025-26ನೇ ಸಾಲಿನ ರಸಗೊಬ್ಬರ ದಾಸ್ತಾನಿಗೆ 200 ಕೋಟಿ ರೂ. ಸಾಲಕ್ಕೆ ಬಂಡವಾಳ ಖಾತ್ರಿ ನೀಡುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಜಲಾನಯನ ಅಭಿವೃದ್ಧಿ ಘಟಕ, ಪ್ರಧಾನಮಂತ್ರಿ ಕೃಷಿ ಸಿಂಚಯಿ ಹೆಚ್ಚುವರಿ 15 ಯೋಜನೆಗಳು 15 ತಾಲೂಕುಗಳಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಂಪುಟ ಒಪ್ಪಿಗೆ ನೀಡಿದೆ.

Key words:  age relaxation, recruitment, Cabinet Meeting, approves

The post ನೇರ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ: ಸಂಪುಟ ಸಭೆಯಲ್ಲಿ ಅನುಮೋದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಏಷ್ಯನ್ ಗೇಮ್ಸ್: ಇರಾನ್ ಮಣಿಸಿ ಚಿನ್ನದ  ಪದಕಕ್ಕೆ ಮುತ್ತಿಕ್ಕಿದ ಭಾರತದ ಮಹಿಳಾ ಕಬಡ್ಡಿ ತಂಡ

ಟೋಕಿಯೋ,ಸೆಪ್ಟಂಬರ್‌,26,(www.justkannada): ಜಪಾನ್ ‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್‌ನಲ್ಲಿ   ಭಾರತದ...

ബ്രാഹ്‌മണ യുവതിയെ പ്രണയിച്ചതിന് യു.പിയില്‍ ദളിത് യുവാവിനെ പൊലീസ് സ്റ്റേഷനില്‍ തല്ലിക്കൊന്നു

ലഖ്‌നൗ: ഉത്തര്‍പ്രദേശിലെ പ്രതാപ്ഗഢ് ജില്ലയില്‍ ദുരഭിമാന കൊല. ബ്രാഹ്‌മണ വിഭാഗത്തില്‍പ്പെട്ട യുവതിയെ...

''எப்படி கூச்சமே இல்லாமல் பேச முடிகிறது?" – முதல்வர் விஜய்யை சாடிய ஸ்டாலின்

தமிழ்நாட்டில் 2 தொகுதி இடைத்தேர்தலில் பிரசாரம் சூடுபிடித்துள்ளது. மதுராந்தகத்தில் தவெக வேட்பாளரை...

PM Modi: భజన క్లబ్బింగ్‌లో మోడీ.. యువతతో కలిసి భక్తి పాటలకు కంజర వాయించిన ప్రధాని

ఢిల్లీలో నిర్వహించిన ఓ ప్రత్యేక కార్యక్రమంలో ప్రధాని మోడీ యువతతో కలిసి...