27
March, 2026

A News 365Times Venture

27
Friday
March, 2026

A News 365Times Venture

ಇಂಥಾ ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ  ಹೆದರಲ್ಲ: ಸಿ.ಎಂ ಸಿದ್ದರಾಮಯ್ಯ

Date:

ಮೈಸೂರು, ಅಕ್ಟೋಬರ್ 15,2025 (www.justkannada.in):  ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ್  ಖರ್ಗೆಯವರು ಖುದ್ದು  ತಿಳಿಸಿದ್ದು,  ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಇಂದು ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿನಲ್ಲಿ ಆರ್.ಎಸ್.ಎಸ್. ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು. ಹಾಗೆಯೇ ಸಚಿವ ಪ್ರಿಯಾಂಕ್  ಖರ್ಗೆ ಅವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು.

ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ್ ಖರ್ಗೆ ಅವರು ಹೆದರುವುದಿಲ್ಲ. ನಾನೂ ಹೆದರುವುದಿಲ್ಲ ಎಂದರು.

ಸಮೀಕ್ಷೆ: ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರ ಬಿಟ್ಟರೆ  ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದರು.

ಎಲ್ಲ ಶಾಸಕರಿಗೂ ಅನುದಾನ

ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ  ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿ, ಜೆಡಿಎಸ್ ನವರು   ನಮ್ಮ ಶಾಸಕರಿಗೆ  ಅನುದಾನ ನೀಡಿದ್ದರೇ ?  ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ ಎಂದರು.

ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಬಿಜೆಪಿಯವರು ತಾಕತ್ತಿದ್ದರೆ ಆರ್.ಎಸ್.ಎಸ್. ಮೇಲೆ ನಿಷೇಧ  ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು  ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ ಸೋತು ಹೋದರು ಎಂದು ಕಾಲೆಳೆದರು.

Key words: threats,  Priyank Kharge, not afraid , CM, Siddaramaiah

The post ಇಂಥಾ ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ  ಹೆದರಲ್ಲ: ಸಿ.ಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್

ನವದೆಹಲಿ,ಮಾರ್ಚ್,26,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ...

ബി.ജെ.പി സീൽ വിവാദം: തെരഞ്ഞെടുപ്പ് ഓഫീസർ വിശദീകരണം നൽകിയിട്ടും വ്യാജ പ്രചാരണം തുടരുന്നു; നടപടിയെടുത്തതിൽ വിശദീകരണവുമായി കേരള പോലീസ്

തിരുവനന്തപുരം: കേരളത്തിലെ രാഷ്ട്രീയ പാർട്ടികൾക്ക് അയച്ച കത്തിൽ ബി.ജെ.പിയുടെ സീൽ ഉൾപ്പെട്ട...

“அடுத்த 60 நாள்களுக்கு…" – இந்தியாவில் எரிபொருள் பற்றாக்குறை வதந்திக்கு மத்திய அரசு விளக்கம்!

ஈரான் - அமெரிக்கா, இஸ்ரேல் போர் காரணமாக ஈரான் ஹார்முஸ் ஜலசந்தியை...

Nandyala: వివాహ బంధానికి మాయని మచ్చ.. ప్రియుడి మోజులో పడి ఇల్లాలు ఎంత పని చేసిందంటే..!

ఏడడుగులు నడిచి జీవితాంతం కలసి జీవిస్తామని కొత్త బంధంతో జీవితాన్ని ప్రారంభించిన...