26
August, 2026

A News 365Times Venture

26
Wednesday
August, 2026

A News 365Times Venture

ಸರ್ಕಾರಿ ಸ್ಥಳಗಳಲ್ಲಿ RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್:  ಸಚಿವ ಸಂಪುಟದಲ್ಲಿ ನಿರ್ಧಾರ

Date:

ಬೆಂಗಳೂರು, ಅಕ್ಟೋಬರ್, 16,2025 (www.justkannada.in): ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್  ಸೇರಿ ಖಾಸಗಿ ಸಂಘಸಂಸ್ಥೆಗಳ ಚಟುವಟಿಕೆಗೆ ರಾಜ್ಯ ಸರ್ಕಾರ ಬ್ರೇಕ್  ಹಾಕಿದ್ದು ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ಸಂಘ ಸಂಸ್ಥೆಗಳು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ದವಾಗಿ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಆರ್ ಎಸ್ ಎಸ್ ಹೆಸರು ಉಲ್ಲೇಖ ಮಾಡದೆ ಅದರ ಕಾರ್ಯ ಚಟುವಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

ತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಧಾರದಂತೆ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ ನಿಯಮ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ತನ್ನ ತೀರ್ಮಾನದಲ್ಲಿ ಎಲ್ಲಿಯೂ ಆರ್‌ಎಸ್‌ಎಸ್‌ ಪದ ಬಳಕೆ ಮಾಡದೇ ಸರ್ಕಾರ ಖಾಸಗಿ ಸಂಸ್ಥೆಗಳು ಎಂದು ಉಲ್ಲೇಖಿಸಿದೆ.

ಈ ನಿಯಮ ಜಾರಿಯಾದರೆ ಆರ್‌ಎಸ್‌ಎಸ್‌ ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಅನುಮತಿ ಪಡೆಯಬೇಕಾಗುತ್ತದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಗೆ ಕಡಿವಾಣ ಹಾಕುವ ಬಗ್ಗೆ ಇಂದಿನ ಸಭೆಯಲ್ಲಿ ತಿರ್ಮಾನಿಸಲಾಗುವುದು. ತಮಿಳುನಾಡು ಮಾದರಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆ ಮುನ್ನ ತಿಳಿಸಿದ್ದರು.

Key words: Cabinet, decides, RSS , private organizations, activities

The post ಸರ್ಕಾರಿ ಸ್ಥಳಗಳಲ್ಲಿ RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್:  ಸಚಿವ ಸಂಪುಟದಲ್ಲಿ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ...

എന്നെപ്പോലെ സ്വയം വഴി വെട്ടിയവര്‍ ഉണ്ടെങ്കില്‍ വരൂ; വോട്ടിന്റെ കണക്ക് പറഞ്ഞ് അന്‍വര്‍

മലപ്പുറം: കഴിഞ്ഞ നിയമസഭാ തെരഞ്ഞെടുപ്പില്‍ ബേപ്പൂര്‍ മണ്ഡലത്തില്‍ യു.ഡി.എഫിനകത്ത് നിന്ന് തന്നെ...

“உடனடியாக அனைத்து வாக்குறுதிகளையும் ஏன் நிறைவேற்றவில்லை எனக் கேட்க முடியாது" – விசிக திருமாவளவன்

விடுதலை சிறுத்தைகள் கட்சி சார்பில் பரந்தூர் புதிய விமான நிலையத் திட்டம்...

Modi-Rahul Gandhi: కులగణనపై మోడీకి ఖర్గే, రాహుల్‌గాంధీ లేఖ.. ఏముందంటే..!

కులగణన ప్రక్రియపై కాంగ్రెస్ అగ్రనేతలు రాహుల్ గాంధీ, మల్లికార్జున ఖర్గే కేంద్ర...