ರಾಯಚೂರು,ಅಕ್ಟೋಬರ್,17,2025 (www.justkannada.in): ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಗ್ರಾಮೀಣ ಅಭಿವೃದ್ದಿ ಅಧಿಕಾರಿಯನ್ನು(PDO) ಅಮಾನತು ಮಾಡಿ ಗ್ರಾಮೀಣಾಭಿವೃದ್ದಿ ಇಲಾಖೆ ಆದೇಶ ಹೊರಡಿಸಿದೆ.
ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನ ಪಿಡಿಓ ಪ್ರವೀಣ್ ಕುಮಾರ್ ಅಮಾನತಾದವರು. ಆರ್ ಎಸ್ ಎಸ್ ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಸಮವಸ್ತ್ರ ಧರಿಸಿ ಪಥ ಸಂಚಲನದಲ್ಲಿ ಪ್ರವೀಣ್ ಕುಮಾರ್ ಭಾಗಿಯಾಗಿದ್ದರು.
ಈ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯು ಪಿಡಿಓ ಪ್ರವೀಣ್ ಕುಮಾರ್ ಅಮಾತುಗೊಳಿಸಿ ಆದೇಶಿಸಿದೆ. ನಿನ್ನೆಯಷ್ಟೆ ಸಚಿವ ಸಂಪುಟ ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕಾರ್ಯಕ್ರಮ ನಡೆಸಬೇಕಾದರೇ ಪೂರ್ವಾನುಮತಿ ಪಡೆಯಬೇಕು ಎಂಬ ನಿರ್ಬಂಧವನ್ನ ವಿಧಿಸುವುದಕ್ಕೆ ನಿರ್ಧಾರ ಕೈಗೊಂಡಿದೆ.
Key words: Suspend ,PDO, involved, RSS
The post RSS ಪಥಸಂಚಲನದಲ್ಲಿ ಭಾಗಿಯಾದ PDO ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





