ಬೆಂಗಳೂರು,ಅಕ್ಟೋಬರ್,23,2025 (www.justkannada.in): ನಮ್ಮ ತಂದೆ ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಅವರ ವೈಚಾರಿಕತ್ವ, ಪ್ರಗತಿಪರ ಚಿಂತನೆಗಳು ಹಾಗೂ ಎಲ್ಲರನ್ನೂ ಸಮಾನಾಗಿ ತೆಗೆದುಕೊಂಡು ಹೋಗುವ ನಾಯಕತ್ವದ ಗುಣ ಸಚಿವ ಸತೀಶ್ ಜಾರಕಿಹೊಳಿಯವರಲ್ಲಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.
ಇದೀಗ ನಿನ್ನೆ ತಾವು ನೀಡಿದ್ದ ಹೇಳಿಕೆ ಕುರಿತು ಇಂದು ಮಾಧ್ಯಮವೊಂದರಲ್ಲಿ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
“ನನ್ನ ಹೇಳಿಕೆ ಮುಖ್ಯಮಂತ್ರಿಯನ್ನು ಬದಲಾಯಿಸುವ ಬಗ್ಗೆ ಅಲ್ಲ. ಸಿದ್ದರಾಮಯ್ಯ ಸರ್ 2028 ರ ನಂತರ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅವರ ನಂತರ, ಸಾಮಾಜಿಕ ನ್ಯಾಯ, ಜಾತ್ಯತೀತ ಸಿದ್ಧಾಂತದಂತಹ ಕಾಂಗ್ರೆಸ್ ಸಿದ್ಧಾಂತದಲ್ಲಿ ಬಲವಾಗಿ ನಂಬಿಕೆ ಇಡುವ ಯಾರಾದರೂ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗುತ್ತದೆ ಎಂದು ನಾನು ಹೇಳಿದ್ದೇನೆ. ನಾನು ಹೇಳಿದ್ದು ಇಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.
ನಿನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ, ನಮ್ಮ ತಂದೆ ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಅವರ ವೈಚಾರಿಕತ್ವ, ಪ್ರಗತಿಪರ ಚಿಂತನೆಗಳು ಹಾಗೂ ಎಲ್ಲರನ್ನೂ ಸಮಾನಾಗಿ ತೆಗೆದುಕೊಂಡು ಹೋಗುವ ನಾಯಕತ್ವದ ಗುಣ ಸಚಿವರಾದ ಸತೀಶ್ ಜಾರಕಿಹೊಳಿಯವರಲ್ಲಿದೆ ಅವರು ನಾಯಕತ್ವವನ್ನು ನಿಭಾಯಿಸುತ್ತಾರೆ ಎಂದಿದ್ದರು.
Key words: MLC, Yathindra Siddaramaiah, clarifies, statement, Satish Jarkiholi
The post ಸತೀಶ್ ಜಾರಕಿಹೊಳಿ ಕುರಿತು ಹೇಳಿಕೆಗೆ ಸ್ಪಷ್ಟನೆ ಕೊಟ್ಟ MLC ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





