ಮೈಸೂರು, ಅಕ್ಟೋಬರ್, 25, 2025 (www.justkannada.in): ತುರ್ತು ನಿರ್ವಹಣಾ ಕಾರ್ಯನಿಮಿತ್ತ ಅಕ್ಟೋಬರ್ 27 ಮತ್ತು 28ರಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
ನಿಗದಿತ ದಿನಾಂಕಗಳಂದು ತುರ್ತು ನಿರ್ವಹಣೆ ಇರುವುದರಿಂದ ಅಕ್ಟೋಬರ್ 27ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 28ರ ಬೆಳಗ್ಗೆ 11 ಗಂಟೆಯವರೆಗೆ ಸೆಸ್ಕ್ ನ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಇನ್ನಿತರ ಆನ್ ಲೈನ್ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ.
ಸೆಸ್ಕ್ ವ್ಯಾಪ್ತಿಯ ಪ್ರದೇಶಗಳಾದ ಮೈಸೂರು, ನಂಜನಗೂಡು, ಹುಣಸೂರು, ಕೆ.ಆರ್. ನಗರ, ಮಂಡ್ಯ, ಮಳವಳ್ಳಿ, ಚಾಮರಾಜನಗರ, ಕೊಳ್ಳೇಗಾಲ, ಹಾಸನ, ಅರಸೀಕೆರೆ, ಚನ್ನರಾಯಪಟ್ಟಣ ಹಾಗೂ ಮಡಿಕೇರಿ ವ್ಯಾಪ್ತಿಯ ಗ್ರಾಹಕರಿಗೆ ಆನ್ ಲೈನ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಸೆಸ್ಕ್ ಪ್ರಕಟಣೆಯಲ್ಲಿ ಕೋರಿದೆ.
Key words: CESC, online services, not available
The post ಗ್ರಾಹಕರೇ ಗಮನಿಸಿ: ಈ ದಿನಗಳಲ್ಲಿ ‘ಸೆಸ್ಕ್’ ಆನ್ ಲೈನ್ ಸೇವೆಗಳು ಲಭ್ಯವಿರಲ್ಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





