6
May, 2026

A News 365Times Venture

6
Wednesday
May, 2026

A News 365Times Venture

ಸಂಕಷ್ಟದಲ್ಲಿ ಕಬ್ಬು ಬೆಳೆಗಾರರು: ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ- ಬಿವೈ ವಿಜಯೇಂದ್ರ

Date:

ಬೆಳಗಾವಿ,ನವೆಂಬರ್,4,2025 (www.justkannada.in): ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಸಂಕಷ್ಟ ಆಲಿಸುತ್ತಿಲ್ಲ. ಹೀಗಾಗಿ ನಾವು ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,  ಕಬ್ಬಿಗೆ ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ.  ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಕಬ್ಬಿನ ಬೆಳೆಗಾರರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಲು  ಬಂದಿದ್ದೇವೆ ಎಂದರು.

‘ಭಾರೀ  ಮಳೆಯಿಂದಾಗಿ ಬೆಳೆಹಾನಿಯಾಗಿ ರೈತರು ತೊಂದರೆಗೀಡಾದಾಗ ಸಹ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಕಂದಾಯ ಸಚಿವರು ಮತ್ತು ಕೃಷಿ ಸಚಿವರು ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡಲಿಲ್ಲ. ಸರ್ಕಾರಕ್ಕೆ ರೈತರ ಪರ ಕಾಳಜಿ ಇಲ್ಲ. ಹಾಗಾಗಿ ಇಂದು ಕಬ್ಬಿನ ದರಕ್ಕಾಗಿ ರೈತರು ಮತ್ತೆ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದು ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words: Sugarcane, growers, government, BY Vijayendra

The post ಸಂಕಷ್ಟದಲ್ಲಿ ಕಬ್ಬು ಬೆಳೆಗಾರರು: ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബംഗാളിൽ ജനാധിപത്യം കൊലചെയ്യപ്പെട്ടു, ബി.ജെ.പിയുടെ ജൈത്ര യാത്ര പഞ്ചാബിൽ അവസാനിക്കും; കെജ്‌രിവാൾ

ന്യൂദൽഹി: പശ്ചിമ ബംഗാൾ തെരഞ്ഞെടുപ്പ് ബി.ജെ.പി അട്ടിമറിച്ചെന്ന് ആം ആദ്മി പാർട്ടി...

MK Stalin: "கொளத்தூர் மக்களுக்காக என்றும் நான் உண்மையாக உழைப்பேன்!" – மு.க.ஸ்டாலின் உருக்கம்

Tகொளத்தூரில் அவரை போட்டியிட்ட தவெக வேட்பாளர் வி.எஸ். பாபு 8000 வாக்கு...

Story Board : దీదీ దూకుడుకి కళ్లెం పడ్డట్టేనా..? బెంగాల్ కూతురు భవిష్యత్ కార్యాచరణ ఏంటి..?

Story Board : బెంగాల్లో మమత అప్రతిహత రాజకీయ విజయాలకు బ్రేక్...

‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಮೇ,5,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 207...