ಬಿಲಾಸ್‌ಪುರ, ನವೆಂಬರ್ 4,2025 (www.justkannada.in): ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್‌ಪುರ ಬಳಿ ನಡೆದಿದೆ.
ಛತ್ತೀಸ್‌ಗಢದ ಬಿಲಾಸ್‌ಪುರದ ಲಾಲ್‌ಖಾದನ್ ಬಳಿ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಬೋಗಿಗಳು ಹಳಿತಪ್ಪಿವೆ
ಎರಡು ರೈಲು ನಿಲ್ದಾಣಗಳ ನಡುವಿನ ಅಪ್ ಲೈನ್ ನಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 6 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೆ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
Key words: 6 Death, collision, between, two trains
The post ಎರಡು ರೈಲುಗಳ ನಡುವೆ ಡಿಕ್ಕಿಯಾಗಿ 6 ಮಂದಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





