5
December, 2025

A News 365Times Venture

5
Friday
December, 2025

A News 365Times Venture

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ನವೆಂಬರ್, 8,2025 (www.justkannada.in):  ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು  ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು.

ಕನಕದಾಸರು ವಿಶ್ವಮಾನವರು. ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು.  ಶ್ರೀಕೃಷ್ಣನ ಮಹಾ ಭಕ್ತರಾಗಿದ್ದು ಉಡುಪಿಯಲ್ಲಿ  ಕನಕನ ಕಿಂಡಿ ನಿರ್ಮಾಣವಾಗಲು ಕಾರಣರಾದರು. ಅಂಥವರ ಜನ್ಮ ದಿನವನ್ನು ಇಂದು ಆಚರಿಸುವ ಮೂಲಕ ಜನತೆಗೆ ಕನಕದಾಸರ ಬಗ್ಗೆ ಜನರಿಗೆ ತಿಳಿಸಿಕೊಡಲಾಗುತ್ತಿದೆ. ಅವರು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದ್ದರೂ ವಿಶ್ವಮಾನವರಾದರು ಎಂದರು.

“ಕುಲಕುಲ ವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ”  ಎಂದು ಹೇಳಿ ಮನುಷ್ಯರೆಲ್ಲರೂ ಒಂದೇ ಎಂದು ಸಾರಿದರು. ತಮ್ಮ ಕೀರ್ತನೆ, ಹಾಡುಗಳ ಮೂಲಕ ಈ ಸಂದೇಶವನ್ನು ತಿಳಿಸಿದ್ದಾರೆ. ಅವರನ್ನು ಗೌರವಿಸಿ ಸ್ಮರಿಸುವ ಕೆಲಸವನ್ನು ಸರ್ಕಾರ ಇಂದು ಮಾಡುತ್ತಿದೆ ಎಂದರು.

ಪ್ರತಿ ಟನ್ ಕಬ್ಬಿಗೆ 3300 ದರ ನಿಗದಿ ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಆಗಿದೆ.

ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ  ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ  ಸಕ್ಕರೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3200 ರೂ.ಗಳಿಗೆ ಅವರು ಒಪ್ಪಿರಲಿಲ್ಲ. ನಂತರದಲ್ಲಿ ಒಪ್ಪಿಕೊಂಡರು. 50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ  ಪಾವತಿಸಲಿದೆ. 10.25  ರಿಕವರಿ ಇದ್ದರೆ  3100 ರೂ.ಜೊತೆಗೆ 100 ರೂ.ಗಳು, ಹಾಗೂ  11.25 ರಿಕವರಿ ಇದ್ದರೆ 3200 ಜೊತೆಗೆ  100 ರೂ. ಸೇರಿದಂತೆ ಒಟ್ಟು 3300  ಒದಗಿಸಲಾಗುವುದು ಎಂದರು.

ಆದೇಶ ಹೊರಡಿಸಲಾಗುವುದು

ಈ ಬಗ್ಗೆ ಸರ್ಕಾರದ  ಆದೇಶ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದರು.

ಪ್ರತ್ಯೇಕ ಸಭೆ

ಸರ್ಕಾರ ಬೇರೆ ವಿಚಾರಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಿದೆ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದರು.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ: ಪರಿಶೀಲನೆ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ ದೊರಕುತ್ತಿರುವ ಬಗ್ಗೆ ವೀಡಿಯೋ ವೈರಲ್ ಆಗಿರುವ ಬಗ್ಗೆ  ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Key words: Kanakadasa, visionary person, CM Siddaramaiah

The post ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....