5
December, 2025

A News 365Times Venture

5
Friday
December, 2025

A News 365Times Venture

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

ಬೆಂಗಳೂರು,ನವೆಂಬರ್,11,2025 (www.justkannada.in):  ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಉದ್ಘಾಟಿಸಿದರು.

ಉದ್ಘಾಡಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, `ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು ಎಂದರು.‌

ಸಚಿವ ಎಂ. ಬಿ ಪಾಟೀಲ್ ಮಾತನಾಡಿ, `ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳು,  ಮುಂತಾದವು ಸಿಗಲಿವೆ. ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ ಎಂದಿದ್ದಾರೆ.

ರಾಜ್ಯವೇ ಹೆಮ್ಮೆಪಡುವಂತಹ ಪಾರಂಪರಿಕ ಮತ್ತು ಭೌಗೋಳಿಕ ವಿಶಿಷ್ಟತೆಯ ಮನ್ನಣೆ ಹೊಂದಿರುವ ಉತ್ಪನ್ನಗಳನ್ನು ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಮಳಿಗೆ ಆರಂಭದ ಆಶಯವಾಗಿದೆ. ಇದಕ್ಕೆ ಸರಕಾರಿ ಸ್ವಾಮ್ಯದ ಕೆ.ಎಸ್.ಡಿ.ಎಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತ, ಕೆಎಸ್ಐಸಿ, ಕಾಫಿ ಬೋರ್ಡ್ ಮತ್ತು ಲಿಡ್ಕರ್ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ. ವಿಮಾನ ನಿಲ್ದಾಣಕ್ಕೆ ಬರುವವರಿಗೆ ಮತ್ತು ಇಲ್ಲಿಂದ ಹೋಗುವವರಿಗೆ ಒಂದೇ ತಾಣದಲ್ಲಿ ಕರ್ನಾಟಕದ ಅಸ್ಮಿತೆ ಇಲ್ಲಿ ಅನುಭವಕ್ಕೆ ಸಿಗಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಬಣ್ಣಿಸಿದ್ದಾರೆ.

ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಕಲಾಲೋಕ ಮಳಿಗೆಗೆ ಟರ್ಮಿನಲ್ -2ರ ಡೊಮೆಸ್ಟಿಕ್ ಬೇನಲ್ಲಿ 132 ಚ.ಮೀ. ಜಾಗವನ್ನು ಬಾಡಿಗೆಗೆ ಒದಗಿಸಿದೆ. ಟರ್ಮಿನಲ್-2ರಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರ ನಿರ್ಗಮನ ವಲಯದಲ್ಲಿ 140 ಚ.ಮೀ. ಜಾಗದಲ್ಲಿ ಇಂತಹುದೇ ಮತ್ತೊಂದು ಮಳಿಗೆ ಆರಂಭಿಸಲಾಗುವುದು. ಮಳಿಗೆಯನ್ನು ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪಡಿಯಚ್ಚಿನಂತೆ ಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಹಿಂದೆ ದೂರದೃಷ್ಟಿ ಇದೆ ಎಂದು  ಎಂ.ಬಿ ಪಾಟೀಲ್ ಅವರು ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಜವಳಿ ಆಯುಕ್ತರಾದ ಜ್ಯೋತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಪಿ.ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

Key words: CM Siddaramaiah, attractive, Kalaloka store, Kempegowda Airport

The post ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....