5
May, 2026

A News 365Times Venture

5
Tuesday
May, 2026

A News 365Times Venture

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ‘ಕೈ’ ಸರ್ಕಾರ ಸಂಪೂರ್ಣ ವಿಫಲ- ಆರ್.ಅಶೋಕ್

Date:

ಬೆಂಗಳೂರು, ಜನವರಿ,31,2026 (www.justkannada.in): ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ‘ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ’ ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಪರಮೇಶ್ವರ್ ಉಡಾಫೆ ಉತ್ತರ ಕೊಟ್ಟಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಮಟ್ಟ ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ ಎಂದು ಆರ್.ಅಶೋಕ್ ಟೀಕಿಸಿದ್ದಾರೆ.

ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ ಅಶೋಕ್ ಹರಿಹಾಯ್ದಿದ್ದಾರೆ.

Key words: Congress government,  failed, drug, R. Ashok

The post ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ‘ಕೈ’ ಸರ್ಕಾರ ಸಂಪೂರ್ಣ ವಿಫಲ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2024ല്‍ 11 സീറ്റ്, 2026ലേക്കെത്തിയപ്പോള്‍ മൂന്ന്; ‘ജയിച്ച സീറ്റിലും തോറ്റ്’ ബി.ജെ.പി

  കോഴിക്കോട്: 2025 തദ്ദേശ തെരഞ്ഞെടുപ്പിന് പിന്നാലെ 2026 നിയമസഭാ തെരഞ്ഞെടുപ്പിലും...

தேர்தல் முடிவுகள்: தவெக `மிஸ்' செய்த மாவட்டங்கள் – முழு விவரம் இதோ!

நடந்து முடிந்த சட்டமன்றத் தேர்தலில், தமிழக வெற்றிக் கழகம் எனும் பேரலையில்...

Suvendu Adhikari: రాజీనామా చేయనన్న మమత ప్రకటనపై సువేందు అధికారి ఏమన్నారంటే..!

ముఖ్యమంత్రి పదవికి రాజీనామా చేయనని మమతా బెనర్జీ మొండికేశారు. ‘‘ఎన్నికల్లో ఓడిపోలేదని.....

ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.

ರಾಮನಗರ,ಮೇ,5,2026 (www.justkannada.in):  ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ...