ಬೆಂಗಳೂರು,ಫೆಬ್ರವರಿ,10,2026 (www.justkannada.in): ಕೆನಡಾದಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿರುವ ಕನ್ನಡಿಗ ಚಂದನ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಮೂರ್ನಾಲ್ಕು ದಿನಗಳಲ್ಲಿ ಭಾರತಕ್ಕೆ ತರಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನೆಲಮಂಗದ ತ್ಯಾಮಗೊಂಡ್ಲುವಿನ ಚಂದನ್ ಕುಮಾರ್ ಅವರ ಮನೆಗೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಪೋಷಕರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ್, ಚಂದನ್ ಕುಮಾರ್ ಪ್ರತಿಭಾನ್ವಿತ ವ್ಯಕ್ತಿ ವಿದೇಶಕ್ಕೆ ಹೋಗಿ ಕೆಲಸ ಮಾಡುತ್ತಿದ್ದಾಗ ಹತ್ಯೆಯಾಗಿರುವುದು ನೋವಿನ ವಿಚಾರ. ಚಂದನ್ ಕುಮಾರ್ ವಿದೇಶದಲ್ಲಿ ಪ್ರಾಜೆಕ್ಟ್ ಡೈರೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಇದು ಅತ್ಯಂತ ದುರ್ಘಟನೆ. ಆರೋಪಿಗಳ ವಿರುದ್ಧ ಕೆನಡಾ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಮೃತಪಟ್ಟಿರುವ ನೆಲಮಂಗಲ ಮೂಲದ ಚಂದನ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಆದಷ್ಟು ಶೀಘ್ರ ಭಾರತಕ್ಕೆ ತರಲು ವಿದೇಶಾಂಗ ಸಚಿವಾಲಯದ ಸಹಕಾರ ಕೋರಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಮೃತದೇಹ ಭಾರತಕ್ಕೆ ತರಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
Key words: Chandan Kumar, dies, Canada, Home Minister, Parameshwar
The post ಕೆನಡಾದಲ್ಲಿ ಕನ್ನಡಿಗ ಚಂದನ್ ಕುಮಾರ್ ಸಾವು: ಮೂರ್ನಾಲ್ಕು ದಿನಗಳಲ್ಲಿ ಮೃತದೇಹ ತಾಯ್ನಾಡಿಗೆ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





