16
February, 2026

A News 365Times Venture

16
Monday
February, 2026

A News 365Times Venture

ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ ಮುಂದುವರೆಸುತ್ತೇವೆ- ಸಿಎಂ ಸಿದ್ದರಾಮಯ್ಯ

Date:

ಹಾವೇರಿ, ಫೆಬ್ರವರಿ,14,2026 (www.justkannada.in): ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ  ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು,  ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತಿದ್ದೇವೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಇಂದು ಹಾವೇರಿಯ ಸರ್ಕಾರಿ ಮೆಡಿಕಲ್ ಕಾಲೇಜು ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ  ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ  ವಿರೋಧಿಸುತ್ತಿದ್ದಾರೆ. ಅವರು  ಅಧಿಕಾರದಲ್ಲಿದ್ದ  ನಾಲ್ಕು ವರ್ಷಗಳ ಕಾಲ ಏನೂ ಮಾಡಿರಲಿಲ್ಲ ಎಂದರು.

ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ. ನಾಲ್ಕು ವರ್ಷಗಳಲ್ಲಿ ಅವರು ಏನು ಮಾಡಿದ್ದಾರೆ. 2018 ರಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10% ರಷ್ಟು ಈಡೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಸರ್ಕಾರ ಎಂದು ಸಂಸದ ಬಿ. ವೈ.ರಾಘವೇಂದ್ರ ಹೇಳಿರುವುದು ಮಾಡಿರುವುದು ಸುಳ್ಳು ಆರೋಪ ಎಂದರು.

ಅಧಿಕಾರ ಹಂಚಿಕೆ: ಪಕ್ಷದ ತೀರ್ಮಾನ ಅಂತಿಮ

ಅಧಿಕಾರ ಹಂಚಿಕೆಯ ಕುರಿತು  ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ಈಗಾಗಲೇ ತಿಳಿಸಲಾಗಿದೆ. ವರಿಷ್ಠರು ಹೇಳಿದ್ದನ್ನು ಪಕ್ಷದ ಎಲ್ಲರೂ ಕೇಳಬೇಕು ಎಂದರು. ಶಾಸಕರು ಈ ಬಗ್ಗೆ ಮಾಡಿರುವ ಟ್ವೀಟ್ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು ಮಾಡಿದ್ದರೆ  ಮಾಡಿದ್ದಾರೆಯೇ?  ಎಂದರು.

ಹೈ ಕಮಾಂಡ್ ಶಿವರಾತ್ರಿಯ ನಂತರ ಬದಲಾವಣೆ ಎಂದು ಹೇಳಿದ್ದಾರೆಯೇ ಎಂಬ ಪ್ರಶ್ನೆಗೆ ಅವರು ದೆಹಲಿಗೆ  ಕರೆದಾಗ ಹೋಗುವುದಾಗಿ ತಿಳಿಸಿ, ಅಧಿಕಾರ ಹಂಚಿಕೆಯ ಬಗ್ಗೆ ಈಗಾಗಲೇ ಉತ್ತರಿಸಿದ್ದು,  ಈ  ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ ಎಂದರು.

ಕೇಂದ್ರ ಸರ್ಕಾರದ ಬಗ್ಗೆ ಭರವಸೆ, ನಂಬಿಕೆ ಇಲ್ಲ

ಬೇಡ್ತಿ – ವರದಾ ನದಿಯ ಜೋಡಣೆ ಬಗ್ಗೆ ಉತ್ತರ ಕನ್ನಡ ಜನತೆ ವಿರೋಧ  ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಡಿಪಿಆರ್ ನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದ್ದು ಅವರು ತೀರ್ಮಾನ ಕೈಗೊಳ್ಳಬೇಕಾಗಿದೆ. ಕೇಂದ್ರ ಸರ್ಕಾರ ಯಾವುದರ ಬಗ್ಗೆಯೂ ತೀರ್ಮಾನ ಮಾಡುತ್ತಿಲ್ಲ. ಹಾಗಾಗಿ ನಮಗೆ ಅವರು ತೀರ್ಮಾನ ಕೈಗೊಳ್ಳುವ ಬಗ್ಗೆ ಭರವಸೆಯಾಗಲಿ, ನಂಬಿಕೆಯಾಗಲಿ ಇಲ್ಲ ಎಂದರು.

ಸಾಮಾಜಿಕ , ಶೈಕ್ಷಣಿಕ ಸಮೀಕ್ಷೆಯ ವರದಿ ಶೀಘ್ರದಲ್ಲಿಯೇ   ಸಲ್ಲಿಕೆಯಾಗಲಿದ್ದು, ಅದರ ಮೇಲೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.

Key words: continue, program, empower, CM Siddaramaiah

The post ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ ಮುಂದುವರೆಸುತ್ತೇವೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസയില്‍ വംശഹത്യ തുടരുമ്പോഴും മോദി നെതന്യാഹുവിനൊപ്പം; ഇസ്രഈല്‍ സന്ദര്‍ശനത്തിനെതിരെ നഗരങ്ങളില്‍ പ്രതിഷേധം; 23 പേര്‍ കസ്റ്റഡിയില്‍

പൂനെ: പ്രധാനമന്ത്രി നരേന്ദ്ര മോദിയുടെ വരാനിരിക്കുന്ന ഇസ്രഈല്‍ സന്ദര്‍ശനത്തെ അപലപിച്ച് രാജ്യത്തെ...

”மகளிர் உரிமைத் தொகைக்கு முட்டுக்கட்டை போட நினைத்ததை முதல்வர் தகர்த்து விட்டார்” – உதயநிதி ஸ்டாலின்

தஞ்சாவூர் மாவட்டம் பட்டுக்கோட்டையில் ரூ.20 கோடி மதிப்பில் கட்டப்பட்ட புதிய பேருந்து...

വെസ്റ്റ് ബാങ്ക് ഭൂമി മോഷ്ടിക്കാനുള്ള ശ്രമം; ഇസ്രഈലിന്റെ രജിസ്‌ട്രേഷന്‍ നീക്കത്തെ എതിര്‍ത്ത് ഹമാസ്

ഗസ: അധിനിവേശത്തിലൂടെ കൈവശപ്പെടുത്തിയ വെസ്റ്റ് ബാങ്കിലെ പ്രദേശങ്ങള്‍ ഇസ്രഈലിന്റേതായി രജിസ്റ്റര്‍ ചെയ്യാനുള്ള...