17
February, 2026

A News 365Times Venture

17
Tuesday
February, 2026

A News 365Times Venture

ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

Date:

ಬೆಂಗಳೂರು, ಫೆಬ್ರವರಿ ,16,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ  ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್  ತೀರ್ಪು ನೀಡಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದ್ದು, ಅಸಿಂಧುಗೊಳಿಸಿದ ಆದೇಶವನ್ನು ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಲು ಸೂಚನೆ ನೀಡಿದೆ.

ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು  ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಮಧ್ಯೆ ಶಾಸಕ ಸುಬ್ಬಾರೆಡ್ಡಿ ಸಹ ಮುನಿರಾಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಅದನ್ನು ವಜಾಗೊಳಿಸಬೇಕೆಂದು ಮನವಿ ಮಾಡಿದ್ದರು. ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್, ಸುಬ್ಬಾರೆಡ್ಡಿ ಅರ್ಜಿಯನ್ನು ವಜಾ ಮಾಡಿತ್ತು. ಇದೀಗ ಕೋರ್ಟ್, ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದೆ. ಆದರೆ, ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.

Key words: High Court, invalidates, Congress MLA

The post ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡೂಪ್ಲಿನ್ ಕಾಂಪ್ಲೆಕ್ಸ್ ವರ್ತಕರನ್ನು ಖಾಲಿ ಮಾಡಿಸಿ ಆಸ್ತಿ ವಶಕ್ಕೆ ಪಡೆಯಿರಿ: MDA ಪರ ಹೈಕೋರ್ಟ್ ತೀರ್ಪು

ಮೈಸೂರು,ಫೆಬ್ರವರಿ,17,2026 (www.justkannda.in): ಮೈಸೂರಿನ ಹೃದಯಭಾಗದಲ್ಲಿರುವ “ಡೂಪ್ಲಿನ್ ಕಾಂಪ್ಲೆಕ್ಸ್”  ನ ವರ್ತಕರಿಗೆ...

സര്‍ക്കാരിനേറ്റ വന്‍ തിരിച്ചടി; നവകേരള സര്‍വേ ഹൈക്കോടതി റദ്ദാക്കിയതില്‍ കെ.എസ്.യു

തിരുവനന്തപുരം: നവകേരള സര്‍വേ റദ്ദാക്കിയ ഹൈക്കോടതി വിധിയില്‍ പ്രതികരിച്ച് കോണ്‍ഗ്രസിന്റെ വിദ്യാര്‍ത്ഥി...

அரசு அலுவலர்கள் நலன் முதல் புதிய டைடல் பூங்காக்கள் வரை! – தமிழ்நாடு பட்ஜெட் முழுத் தொகுப்பு!

`அரசுப்பணி புரிபவர்கள் விபத்தில் இறந்தால் ரூ.1 கோடி' - தங்கம் தென்னரசு...

AR Rahman vs Anirudh : ఫిబ్రవరి నెలాఖరున రెహమాన్, అనిరుధ్ మధ్య మ్యూజికల్ వార్!

సంగీత ప్రపంచంలో ఇద్దరు ధృవతారలు ఒకే సమయంలో తమ పాటలతో పలకరించబోతుంటే,...