ಗದಗ,ಫೆಬ್ರವರಿ,21,2026 (www.justkannadda.in): ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಗದಗ ಜಿಲ್ಲೆ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಇವರ ಪಿಎಗಳಾದ ಮಂಜುನಾಥ್ , ಗುರು ಲೋಕಾಯುಕ್ತ ಬಲೆಗೆ ಬಿದ್ದವರು. ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿ ವಹಿಸಲು ಗುತ್ತಿಗೆದಾರರ ವಿಜಯ್ ಬಳಿ 10 ಲಕ್ಷ ರೂ.ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ನಡುವೆ ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಲೋಕಾಯುಕ್ತ ಎಸ್ ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಶಾಸಕ ಚಂದ್ರು ಲಮಾಣಿ ಮತ್ತು ಪಿಎಗಳು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಶಾಸಕ ಚಂದ್ರು ಲಮಾಣಿ ಅವರನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
Key words: BJP MLA, Lokayukta, trap, accepting, bribe
The post ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





