24
February, 2026

A News 365Times Venture

24
Tuesday
February, 2026

A News 365Times Venture

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಮಾ.13ರೊಳಗೆ ಅರ್ಜಿ ಸಲ್ಲಿಸಿ

Date:

ಬೆಂಗಳೂರು ಗ್ರಾಮಾಂತರ, ಫೆಬ್ರವರಿ,23,2026 (www.justkannada.in): ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ತರಬೇತಿಯನ್ನು ವಸತಿ ಸಹಿತಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.

ಅರ್ಜಿದಾರರ ಅರ್ಹತೆಗಳು ಮತ್ತು ಸಲ್ಲಿಸಬೇಕಾದ ದಾಖಲೆಗಳು

  1. ಅರ್ಜಿದಾರನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
  2. ಅರ್ಜಿದಾರನ ವಯಸ್ಸು 20 ರಿಂದ 55 ವರ್ಷದೊಳಗಿರಬೇಕು.
  3. ಅರ್ಜಿದಾರನು 10ನೇ ತರಗತಿಯಲ್ಲಿ ಉತ್ತೀರ್ಣನಾಗಿರಬೇಕು.
  4. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.2.00 ಲಕ್ಷ ಮೀರಬಾರದು.
  5. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷ ಮೀರಬಾರದು.
  6. ಅರ್ಜಿದಾರನು ಯಾವ ಜಿಲ್ಲೆಯ ನಿವಾಸಿಯಾಗಿರುತ್ತಾರೋ ಅದೇ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಬೇಕು.
  7. ಆಧಾರ್ ಕಾರ್ಡ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
  8. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರ್ ಅವರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಮತ್ತು ಆಧಾರ ಪತ್ರದ ಪ್ರತಿ.
  9. ಚಾಲ್ತಿಯಲ್ಲಿರುವ ಲಘುವಾಹನ ಚಾಲನ ಪರವಾನಿಗೆ ಜೆರಾಕ್ಸ್ ಪ್ರತಿ.
  10. ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಜೆರಾಕ್ಸ್ ಪ್ರತಿ.
  11. ಯಾವುದೇ ಸರ್ಕಾರಿ ಇಲಾಖೆ/ನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿ ಸೇವೆ ಸಲ್ಲಿಸುತ್ತಿಲ್ಲವೆಂದು ಮತ್ತು ಮೊಬೈಲ್ ಕ್ಯಾಂಟೀನ್ ಫಲಾನುಭವಿಯಾಗಿ ಆಯ್ಕೆಯಾದ ಬಳಿಕ ಪ್ರವಾಸೋದ್ಯಮ ‘ಇಲಾಖೆಯಿಂದ ನೀಡುವ ಕೌಶಲ್ಯಾಭಿವೃದ್ಧಿ Enterprenuership (EP) ತರಬೇತಿಯನ್ನು ಕಡ್ಡಾಯವಾಗಿ ಪಡೆಯತ್ತೇನೆ. ರೂ. 100/- ಬೆಲೆಯ ಛಾಪಾ ಕಾಗದದ Affidavit ನಮೂನೆಯಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು.
  12. ಅರ್ಜಿದಾರರು ಖಾತೆ ಹೊಂದಿದ ಬ್ಯಾಂಕ್ ನಿಂದ ಸಾಲ ಮಂಜೂರಾತಿ ದೃಢೀಕರಣ ಪತ್ರ ಪಡೆದು ಜೆರಾಕ್ಸ್ ಪ್ರತಿ ಲಗತ್ತಿಸುವುದು.
  13. ಅರ್ಜಿದಾರರು ವಾಸಸ್ಥಳ ದೃಢೀಕರಣದ ಜೆರಾಕ್ಸ್ ಪ್ರತಿ.
  14. ಅರ್ಜಿದಾರನು ಮೇಲಿನ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಮುಚ್ಚಿದ ಲಕೋಟೆಯಲ್ಲಿ ದ್ವಿಪ್ರತಿಯಲ್ಲಿ ಸಲ್ಲಿಸತಕ್ಕದ್ದು.

ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 2026 ರ ಮಾರ್ಚ್ 13 ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಸಲು ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Apply, mobile canteen, subsidy

The post ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಮಾ.13ರೊಳಗೆ ಅರ್ಜಿ ಸಲ್ಲಿಸಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅವರು ನಮ್ಮ ರಾಷ್ಟ್ರೀಯ ನಾಯಕರು ಅವರಿಗೆ ಒಂದ್‌ ದೊಡ್ಡ ನಮಸ್ಕಾರ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಫೆಬ್ರವರಿ,23,2026 (www.justkannada.in):  ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು...

CABINET DECISSIONS Full Details: తెలంగాణలో మెగా నిర్ణయాలు.. ఎవరికెంత లాభం.?

తెలంగాణ రాష్ట్ర మంత్రివర్గం కీలక నిర్ణయాలతో మరోసారి సంచలనం సృష్టించింది. ముఖ్యమంత్రి...