24
February, 2026

A News 365Times Venture

24
Tuesday
February, 2026

A News 365Times Venture

ಮಿಷನ್ ಪ್ರಕೃತಿ : ರಾಜ್ಯದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ

Date:

ಬೆಂಗಳೂರು,ಫೆಬ್ರವರಿ,23,2026 (www.justkannada.in): ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ’ (Mission Prakriti: From Classrooms to Conservation – Leading The Change) ಕಾರ್ಯಕ್ರಮದಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಬೆಂಗಳೂರಿನಲ್ಲಿ ವಿಕಾಸಸೌಧದಲ್ಲಿ ನಡೆದ ಈ ಸಮಾರಂಭದಲ್ಲಿ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್, WWF ಇಂಡಿಯಾದ ಸಿಇಒ ಕರಣ್ ಭಲ್ಲಾ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳು ಕೇವಲ ಅಂಕಗಳಿಗಾಗಿ ಓದಬಾರದು. ವಿಷಯವನ್ನು ಆಳವಾಗಿ ಅರ್ಥೈಸಿಕೊಳ್ಳುವುದರ ಕಡೆಗೆ ಗಮನ ಹರಿಸಬೇಕು. ಅರಿವು ಮೂಡಿದರೆ ಫಲಿತಾಂಶ ತಾನಾಗಿಯೇ ಉತ್ತಮವಾಗುತ್ತದೆ ಎಂದು ಕಿವಿಮಾತು ಹೇಳಿದರು.

ತ್ಯಾಜ್ಯ ನಿರ್ವಹಣೆ ಕುರಿತು ಜಪಾನ್‌ ನ ಉದಾಹರಣೆ ನೀಡುತ್ತಾ, “ಅಲ್ಲಿ ಕಸದ ಬುಟ್ಟಿಗಳು ಕಡಿಮೆ ಇದ್ದರೂ ಜನರು ತಮ್ಮ ಕಸವನ್ನು ತಾವೇ ಮನೆಗೆ ತೆಗೆದುಕೊಂಡು ಹೋಗಿ ವಿಲೇವಾರಿ ಮಾಡುತ್ತಾರೆ. ಅಂತಹ ಶಿಸ್ತು ನಮ್ಮಲ್ಲಿ ಬರಬೇಕು,” ಎಂದರು.

ಮುಂದಿನ ವರ್ಷದಿಂದ 1 ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ (Moral Science) ಪಠ್ಯಪುಸ್ತಕವನ್ನು ಪರಿಚಯಿಸಲಾಗುವುದು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶಿಕ್ಷಣದ ಮೊದಲ ಮೆಟ್ಟಿಲು ಎಂದು ಅವರು ಪ್ರತಿಪಾದಿಸಿದರು.

ಸರ್ಕಾರಿ ಶಾಲಾ ಶಿಕ್ಷಕರ ಮೆರಿಟ್ ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳಿಗೆ ಸರ್ಕಾರ ನೀಡುತ್ತಿರುವ ಬಿಸಿಯೂಟ, ರಾಗಿಮಾಲ್ಟ್, ಹಾಲು, ಮೊಟ್ಟೆ/ಬಾಳೆಹಣ್ಣು, ಪಠ್ಯಪುಸ್ತಕ ಮತ್ತು ಸಮವಸ್ತ್ರಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ನಾಗಭೂಷಣ್ ಮತ್ತು ರೆಹಮಾನ್ ಬಿ ಅವರು ಮಿಷನ್ ಪ್ರಕೃತಿಯಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ವನ್ಯಜೀವಿಗಳ ರಕ್ಷಣೆ ಮತ್ತು ಪರಿಸರ ಸಂರಕ್ಷಣೆಯ ಮಹತ್ವವನ್ನು ಈ ಅಭಿಯಾನವು ತಮಗೆ ಹೇಗೆ ಕಲಿಸಿಕೊಟ್ಟಿತು ಎಂಬುದನ್ನು ವಿವರಿಸಿದರು.

ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ವಿಜೇತ ಶಾಲೆಗಳಿಗೆ ಅಭಿನಂದನೆ ಸಲ್ಲಿಸುತ್ತಾ, ಇಲ್ಲಿ ಕಲಿತ ವಿಷಯಗಳನ್ನು ಇತರ ವಿದ್ಯಾರ್ಥಿಗಳಿಗೂ ಹಂಚಿಕೊಳ್ಳುವಂತೆ ಕರೆ ನೀಡಿದರು.

ಪ್ರಶಸ್ತಿ ವಿಜೇತ 10 ಶಾಲೆಗಳು:

ಪರಿಸರ ಜಾಗೃತಿ ಮತ್ತು ಸುಸ್ಥಿರ ಅಭ್ಯಾಸಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಈ ಕೆಳಗಿನ ಶಾಲೆಗಳನ್ನು ಗೌರವಿಸಲಾಯಿತು:

* ಜಿ.ಎಂ.ಪಿ.ಎಚ್.ಎಸ್, ಎಮ್ಮಿಗನೂರು, ಬಳ್ಳಾರಿ.

* ಜಿ.ಕೆ.ಎಚ್.ಪಿ.ಎಸ್, ಕಾತ್ರಾಳ, ಕಾಗವಾಡ, ಬೆಳಗಾವಿ.

* ಜಿ.ಎಚ್.ಎಸ್, ಅಲಿಪುರ, ಚಿಕ್ಕಬಳ್ಳಾಪುರ.

* ಜಿ.ಎಚ್.ಪಿ.ಎಸ್, ಹಿರೇಗೋಣಿಗೆರೆ, ದಾವಣಗೆರೆ.

* ಜಿ.ಎಚ್.ಪಿ.ಎಸ್, ಜೋಡಳ್ಳಿ, ಕಲಘಟಗಿ.

* ಕೆ.ಪಿ.ಎಸ್, ಕೋಟೇಶ್ವರ, ಕುಂದಾಪುರ, ಉಡುಪಿ.

* ಡಿ.ಕೆ.ಜೆಡ್.ಪಿ, ಅಳಿಯೂರು, ದಕ್ಷಿಣ ಕನ್ನಡ.

* ಕೆ.ಎಸ್.ಎಸ್ ಜಿ.ಎಚ್.ಎಸ್, ಹಕ್ಲಾಡಿ, ಬೈಂದೂರು, ಉಡುಪಿ.

* ಕೆ.ಜಿ.ಬಿ.ವಿ, ಯಳಂದೂರು, ಚಾಮರಾಜನಗರ.

* ಜಿ.ಎಚ್.ಪಿ.ಎಸ್, ಮಲ್ಲೂರು, ಉಡುಪಿ.

Key words: Mission Prakriti, Best School, awards,10 schools, state

The post ಮಿಷನ್ ಪ್ರಕೃತಿ : ರಾಜ್ಯದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ- ಸಿಎಂ ಸಿದ್ದರಾಮಯ್ಯ ಕರೆ

ಚಿಕ್ಕಬಳ್ಳಾಪುರ, ಫೆಬ್ರವರಿ , 23,2026 (www.justkannada.in): ಗ್ರಾಮೀಣ ಜನರ ಉದ್ಯೋಗದ...

പള്ളിയിലേക്കുള്ള പ്രവേശനം തടഞ്ഞ് ലഖ്‌നൗ സര്‍വകലാശാല; സഹപാഠികള്‍ക്ക് നിസ്‌കരിക്കാന്‍ കാവല്‍ നിന്ന് ഹിന്ദു വിദ്യാര്‍ത്ഥികള്‍

ലഖ്‌നൗ: ലക്‌നൗ സര്‍വകലാശാലയിലെ മുസ്‌ലിം സുഹൃത്തുക്കള്‍ക്ക് നിസ്‌കരിക്കാനും നോമ്പ് തുറക്കാനും സഹായിക്കുന്നതിന്...

சென்னை கடற்கரை – செங்கல்பட்டு புறநகர் ரயில் சேவைகள் மீண்டும் குறைப்பு; ரயில் பயணிகளுக்கு அதிர்ச்சி

சென்னை எழும்பூர் ரயில் நிலையத்தில் நடைபெற்று வரும் பராமரிப்பு மற்றும் புனரமைப்புப்...

Adulterated Milk: రాజమండ్రిలో కల్తీ పాలతో నలుగురు మృతి.. వెలుగులోకి సంచలన విషయాలు!

Adulterated Milk: రాజమండ్రిలో చోటు చేసుకున్న కల్తీ పాలు విషాదానికి సంబంధించి...