25
February, 2026

A News 365Times Venture

25
Wednesday
February, 2026

A News 365Times Venture

ಬಾಲ್ಯ ವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಮೂಡಿಸಿ-ಜಿಲ್ಲಾಧಿಕಾರಿ – ಡಾ. ಕುಮಾರ

Date:

ಮಂಡ್ಯ ಫೆಬ್ರವರಿ,25,2026 (www.justkannada.in): ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಿಕೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿ ಡಾ.ಕುಮಾರ ಅವರು,  ಜಿಲ್ಲೆಯಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು. ಶಾಲಾ ಹಂತದಲ್ಲಿ ಹೆಣ್ಣು ಮಕ್ಕಳು ಗೈರು ಹಾಜರು ವಿವರಗಳನ್ನು ಶಿಕ್ಷಕರು ಪರಿಶೀಲಿಸಬೇಕು. ಈ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡಬೇಕು ಎಂದು ಹೇಳಿದರು.

ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸಿ  ಮತ್ತು  ಜಿಲ್ಲೆಯ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ ಪೌಷ್ಟಿಕತೆಯನ್ನು ಅಧಿಕಾರಿಗಳು ಪರಿಶೀಲಿಸಿ. ಸಖಿ ಒನ್ ಸ್ಟಾಪ್ ಸೆಂಟರ್ ಗೆ ದಾಖಲಾಗಿರುವ ಪ್ರಕರಣಗಳ ಮೌಲ್ಯಮಾಪನ ವರದಿಯನ್ನು ಒಂದು ವಾರದೊಳಗೆ ನೀಡಬೇಕು ಎಂದು. ಸಖಿ ಒನ್ ಸ್ಟಾಪ್ ಸೆಂಟರ್ ಗಳಲ್ಲಿ ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಮತ್ತು ತಡೆಗಟ್ಟುವ ಸಂಬಂಧ ತಾಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾವಲು ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಮಾಡಬೇಕು. ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ನಿಷೇಧ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು ಎಂದು ಹೇಳಿದರು.

ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಪರಿತ್ಯಕ್ತ ಮಹಿಳೆಯರು ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಒಳಪಟ್ಟ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಬೇಕು ಮತ್ತು ಕಾನೂನಿನ ನೆರವು ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು. ಸಾಂತ್ವನ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು.

2025-26 ನೇ ಸಾಲಿನಲ್ಲಿ ಸಾಂತ್ವನ ಕೇಂದ್ರಗಳಲ್ಲಿ 565ಪ್ರಕರಣಗಳು ದಾಖಲಾಗಿದ್ದು 537 ಪ್ರಕರಣಗಳು ಇತ್ಯರ್ಥಗೊಂಡಿದ್ದು ಉಳಿದ 28 ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥ ಮಾಡಬೇಕು ಎಂದು ಡಿಸಿ ಕುಮಾರ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಶ್ರೀ ಶಕ್ತಿ ಗುಂಪುಗಳು ಸದಸ್ಯರುಗಳಿಗೆ ಅರಿವು ಮೂಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಹೇಳಿದರು.

ಮಿಷನ್ ಶಕ್ತಿ ಯೋಜನೆಯು ಮಹಿಳೆಯರ ಸುರಕ್ಷತೆ ಮತ್ತು ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಯೋಜನೆ ಮಾಡಿದ್ದೂ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ಸೇವೆ, ಕಾನೂನು ಸೇವೆ, ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ನೀಡಿ ಆಪ್ತ ಸಮಾಲೋಚನೆ ಮಾಡಬೇಕು ಎಂದು ಹೇಳಿದರು.

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಹೆಣ್ಣು ಮಕ್ಕಳ ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯ ಉತ್ತೇಜಿಸಬೇಕು. ಕುಸಿಯುತ್ತಿರುವ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಉತ್ತಮಪಡಿಸುವುದು ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸಬೇಕು ಎಂದು ಹೇಳಿದರು.

2025-26  ನೇ ಸಾಲಿನಲ್ಲಿ ಮಹಿಳಾ ಸಬಲೀಕರಣ ಘಟಕದಿಂದ ಜಿಲ್ಲಾದ್ಯಾಂತ  73 ಕಾರ್ಯಕ್ರಮಗಳನ್ನು ಮಾಡಲಾಗಿದ್ದು ಶಾಲಾ ಕಾಲೇಜು ವಸತಿ ನಿಲಯ ವಿದ್ಯಾರ್ಥಿಗಳಿಗೆ 33 ಮತ್ತು ಶಿಕ್ಷಕರಿಗೆ ಅಂಗನವಾಡಿ ಕಾರ್ಯಕರ್ತರಿಗೆ ಸ್ವಸಹಾಯ ಸಂಘದ ಸದಸ್ಯರುಗಳಿಗೆ ಹಾಗೂ ಸಾರ್ವಜನಿಕರಿಗೆ 34 ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು  ತಿಳಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಕ್ತಿ ಸದನ( ಸಸ್ವಾಧಾರ ಗೃಹ )ಮತ್ತು ಉಜ್ವಲ ಕೇಂದ್ರಗಳಲ್ಲಿ ಸಂಕಷ್ಟಕ್ಕೆ ಒಳಗಾದ ಮಹಿಳೆಯರು ಮತ್ತು ವಿಧವೆಯರು ದೌರ್ಜನ್ಯಕ್ಕೊಳಗದ ಮಹಿಳೆಯರಿಗೆ ನಿರ್ಗತಿಕ ಹೆಣ್ಣು ಮಕ್ಕಳಿಯರಿಗೆ ಉಚಿತವಾಗಿ ಊಟ ವಸತಿ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ವೈದ್ಯಕೀಯ ಸೌಲಭ್ಯ ಮತ್ತು ಪುನರ್ವಸತಿ ಪೂರಕವಾಗಿ ವೃತ್ತಿ ತರಬೇತಿ ನೀಡುವುದರ ಜೊತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ.ಎಂ ರವರು ಮಾತನಾಡಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಾಂತ್ವನ ನೀಡಿ ತಮ್ಮ ಹಂತದಲ್ಲಿ  ಸಭೆ ನಡಸಿ ನಂತರದಲ್ಲಿ ನ್ಯಾಯಾಲಯದ ಗಮನಕ್ಕೆ ತರಬೇಕು ಎಂದು ಹೇಳಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ಇರುವುದರಿಂದ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡಬೇಕು ಎಂದು ಹೇಳಿದರು.

ಜಿಲ್ಲೆಯ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಆಹಾರ ಪೌಷ್ಟಿಕತೆಯನ್ನು  ಅಧಿಕಾರಿಗಳು ಪರಿಶೀಲಿಸಬೇಕು. ಮತ್ತು ತಿಂಗಳಿಗೊಮ್ಮೆ ವಿವರಗಳನ್ನು ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಆರ್.ನಂದಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕೆ ಆಶಾ, ಕುಷ್ಟರೋಗ ನಿರ್ಮಾಣ ಅಧಿಕಾರಿ ಡಾ. ಸೋಮಶೇಖರ್, ವಕೀಲರ ಸಂಘದ ಅಧ್ಯಕ್ಷ ಸತ್ಯಾನಂದ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: awareness, rural areas, child marriage,dowry laws, DC,Dr. Kumar

The post ಬಾಲ್ಯ ವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಮೂಡಿಸಿ-ಜಿಲ್ಲಾಧಿಕಾರಿ – ಡಾ. ಕುಮಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾಡು ಪ್ರಾಣಿ-ಮಾನವ ಸಂಘರ್ಷ ತಡೆಗೆ ಬ್ಯಾರಿಕೇಡ್ ಹಾಕುವ ಯೋಜನೆ-ಸಿಎಂ ಸಿದ್ದರಾಮಯ್ಯ

ಉಡುಪಿ,ಫೆಬ್ರವರಿ,25,2026 (www.justkannada.in): ಕಾಡು ಪ್ರಾಣಿಗಳು ಮತ್ತು ಮಾನವನ ನಡುವಿನ ಸಂಘರ್ಷ...

തെറ്റ് ചെയ്‌തെങ്കില്‍ കെ.എസ്.യുവിനെതിരെ നടപടിയെടുക്കും; പ്രതിഷേധങ്ങള്‍ അവസാനിപ്പിക്കില്ല: വി.ഡി. സതീശന്‍

അരൂർ: ആരോഗ്യമന്ത്രി വീണ ജോര്‍ജിനെതിരായ കെ.എസ്.യു പ്രതിഷേധത്തില്‍ പ്രതികരിച്ച് പ്രതിപക്ഷ നേതാവ്...

நல்லகண்ணு: 'உரிமைக்காகப் போராடிய அவரது சேவை என்றும் நினைவில் நிற்கும்'- அரசியல் தலைவர்கள் இரங்கல்

இந்திய அரசியலில் மிக மூத்த தலைவர்களில் ஒருவரும் சுதந்திரப் போராட்ட வீரருமான...

The Paradise: యూట్యూబ్‌లో “ఆయా షేర్” ఊర మాస్ విధ్వంసం..

The Paradise: దసరా తర్వాత నేచురల్ స్టార్ నాని, విజనరీ మేకర్...