ಚೆನ್ನೈ,ಫೆಬ್ರವರಿ,27,2026 (www.justkannada.in): ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಉಚ್ಚಾಟಿತ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಸಿಎಂ ಪನ್ನೀರ್ ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್‌ಸೆಲ್ವಂ ಇದೀಗ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಸಮ್ಮುಖದಲ್ಲಿ ಪನ್ನೀರ್ ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರಿದ್ದಾರೆ.
2022ರ ಜುಲೈ 11ರಂದು ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ನೇಮಿಸಲಾಗಿತ್ತು. ಪ್ರತಿಸ್ಪರ್ಧಿಯಾಗಿದ್ದ ಒ.ಪನ್ನೀರಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟನೆ ಮಾಡಲಾಗಿತ್ತು.
Key words: Tamil Nadu, Panneer Selvam, joins, DMK
The post ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಮೆಚ್ಚಿನ ಶಿಷ್ಯ ಪನ್ನೀರ್ ಸೆಲ್ವಂ ಡಿಎಂಕೆಗೆ ಸೇರ್ಪಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





