16
March, 2026

A News 365Times Venture

16
Monday
March, 2026

A News 365Times Venture

ಉಪಚುನಾವಣೆಗಳ ಗೆಲುವಿಗೆ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಮಾರ್ಚ್, 16,2026 (www.justkannada.in): ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ಇಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ  ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2013 ರಿಂದ 2018 ಮತ್ತು 2023ರಿಂದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಇದುವರೆಗೆ ಮಹಿಳೆಯರು 700  ಕೋಟಿ ಪ್ರಯಾಣಗಳನ್ನು ಕೈಗೊಂಡಿದ್ದಾರೆ. ಮಹಿಳಾ ಕೇಂದ್ರಿತ ಯೋಜನೆಗಳಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಮಹಿಳೆಯರಿಗೆ ಮಾಸಿಕ 2000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿ ಸುಧಾರಿಸಿದೆ. ಆರ್ಥಿಕ ಸ್ವಾತಂತ್ರ್ಯದಿಂದ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಲಿಂಗತಾರತಮ್ಯ ಮತ್ತು ಅಸಮಾನತೆ ನಿವಾರಣೆಯಾಗದೇ ಸ್ವಾತಂತ್ರ್ಯ ಸಾರ್ಥಕತೆ ಹೊಂದುತ್ತದೆ ಎಂದರು.

ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ

ಮಹಿಳೆಯರಲ್ಲಿ ನಾಯಕತ್ವದ ಗುಣ ಬಹಳ ಪ್ರಮುಖವಾಗಿದೆ. ಎಲ್ಲರಿಗೂ ಸಮಾನ ಅವಕಾಶ ದೊರೆತರೆ ಸಮಾನತೆಯನ್ನು ಸಾಧಿಸುವುದು ಸುಲಭವಾಗಿದೆ.  ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನಲ್ಲಿ 1 ಲಕ್ಷಕ್ಕೂ ಹೆಚ್ಚು ಮಹಿಳಾ ಸದಸ್ಯರು ಇದ್ದು, ಭವಿಷ್ಯದಲ್ಲಿ  ಈ ಸಂಖ್ಯೆ 2 ಲಕ್ಷಗಳಿಗೆ ವೃದ್ಧಿಸಬೇಕು. ಉಪಚುನಾವಣೆ ಸಮೀಪಿಸುತ್ತಿರುವುದರಿಂದ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹಿಳಾ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ  ಮಹಿಳಾ ಸದಸ್ಯರ ಎರಡು ತಂಡಗಳನ್ನು ರಚಿಸಿ , ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು  ಸೂಚಿಸಿದರು.

ಕಳೆದ ಬಾರಿ ಚನ್ನಪಟ್ಟಣ, ಶಿಗ್ಗಾಂವ , ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ  ಜಯಭೇರಿ ಬಾರಿಸಿತ್ತು. ಈ ಬಾರಿಯೂ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್  ಪಕ್ಷ ಗೆಲ್ಲಲೇಬೇಕಿದ್ದು , ಇದಕ್ಕಾಗಿ ಅಗತ್ಯ ಸಿದ್ದತೆಗಳನ್ನು ಕಾಂಗ್ರೆಸ್ ಪಕ್ಷ ಮಾಡಿಕೊಂಡಿದೆ ಎಂದರು.

Key words: Congress, women, members, by-elections, CM Siddaramaiah

The post ಉಪಚುನಾವಣೆಗಳ ಗೆಲುವಿಗೆ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സി.പി.ഐ.എം വിട്ട് ടി.കെ. ഗോവിന്ദന്‍; തളിപ്പറമ്പില്‍ പി.കെ. ശ്യാമളക്കെതിരെ മത്സരിക്കും

കണ്ണൂര്‍: സ്ഥാനാര്‍ത്ഥി പ്രഖ്യാപനത്തിന് പിന്നാലെ പാര്‍ട്ടി വിട്ട് കണ്ണൂരിലെ മുതിര്‍ന്ന സി.പി.ഐ.എം...

ஒரே நேரத்தில் 3 சிறுமிகள் பாலியல் வன்கொடுமை; குற்றவாளிக்கு தூக்கு தண்டனை விதித்த போக்சோ நீதிமன்றம்!

நெல்லை மாவட்டம், மேலப்பாளையம் அருகிலுள்ள அழகிரிபுரம் பகுதியைச் சேர்ந்தவர் ஆனந்தசேகர். பெயிண்டரான...

Gas Cylinder: ఒక ఇంట్లో ఎన్ని గ్యాస్ సిలిండర్లు ఉండాలి..? ఈ నిబంధనలు తెలియకపోతే జైలుకే..

ప్రస్తుతం మన దేశంలోని పలు నగరాల్లో వంటగ్యాస్ (LPG) సరఫరాపై ఒత్తిడి...

​​ഇറാനെതിരായ ആക്രമണം പ്രതീക്ഷിച്ചപോലെ മുന്നോട്ട് പോകുന്നിലെന്ന് ഇസ്രഈൽ

ടെൽ അവീവ്: ഇറാന് എതിരേയുള്ള ആക്രമണം പ്രതീക്ഷിച്ചപോലെ മുന്നോട്ട് പോകുന്നില്ലെന്ന് ഇസ്രഈലി...