ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, 890 ಔಷಧಿಗಳನ್ನ ಖರೀದಿಸಲು ಸರ್ಕಾರ ತೀರ್ಮಾನಿಸಿತ್ತು. ಕಂಪನಿಗಳ ಮೂಲಕ 543 ಔಷಧಿ ಖರೀದಿಸಬೇಕಾಗುತ್ತದೆ. ಸ್ಥಳೀಯವಾಗಿ 300 ಔಷಧ ತೆಗೆದುಕೊಳ್ಳಬೇಕಾಗುತ್ತದೆ ಎಂದರು.
ಔಷಧಿಯ ಸರಬರಾಜು ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಾಗುತ್ತದೆ. ಔಷಧಿ ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Key words: medicines, government hospitals, Minister, Dinesh Gundu Rao
The post ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





