ನವದೆಹಲಿ,ಮಾರ್ಚ್,18,2026 (www.justkannada.in): ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ನವದೆಹಲಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ದಾವಣಗೆರೆ ದಕ್ಷಿಣ ಅಭ್ಯರ್ಥಿ ಆಯ್ಕೆ ಬಗ್ಗೆ ವರದಿ ಬಂದಿಲ್ಲ. ಉಪಚುನಾವಣೆ ಸಂಬಂಧ ನಾನು ಸಿಎಂ ಮಾತನಾಡಿದ್ದೇವೆ. ಬಾಗಲಕೋಟೆ ಉಪಚುನಾವಣೆ ಸಂಬಂಧವೂ ಮಾತುಕತೆ ನಡೆಸಿದ್ದೇವೆ ಎಂದರು.
ದಿ.ಹೆಚ್ ವೈ ಮೇಟಿ ಕುಟುಂಬದ ಸದಸ್ಯರು ಸಿಎಂ ಭೇಟಿಯಾಗಿದ್ದಾರೆ ನಾನು ಸಚಿವರ ಜೊತೆ ಮಾತನಾಡುತ್ತೇನೆ. ವೀಕ್ಷಕರು ನೀಡುವ ವರದಿಯನ್ನು ಹೈಕಮಾಂಡ್ ಗೆ ಸಲ್ಲಿಸುತ್ತೇನೆ. ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: By-election, High command, candidate, selection, DCM, DK Shivakumar
The post ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





