ಬಾಗಲಕೋಟೆ,ಮಾರ್ಚ್,23,2026 (www.justkannada.in): ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮ ರಾಜಕಾರಣ ಮಾಡಿಲ್ಲ. ರೈತರು, ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಎಲ್ಲ ಸಮುದಾಯವನ್ನು ಒಳಗೊಂಡ ಪಕ್ಷ ಕಾಂಗ್ರೆಸ್. ನಾವು ನುಡಿದಂತೆ ನಡೆದಿದ್ದೇವೆ.
ಜನಪ್ರತಿನಿಧಿಗಳು ನಿಧನರಾದಾಗ ಸಾಮಾನ್ಯವಾಗಿ ಆ ಕುಟುಂಬದ ಸದಸ್ಯರಿಗೆ ಅವಕಾಶ ನೀಡುವುದು ಕಾಂಗ್ರೆಸ್ ಪಕ್ಷದ ವಾಡಿಕೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮೇಟಿ ಹಾಗೂ ಶಾಮನೂರು ಕುಟುಂಬದ ಸದಸ್ಯರಿಗೆ ಅವಕಾಶ ಮಾಡಿಕೊಡಲಾಗಿದೆ. ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆಯ ಬಳಿಕ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಪುತ್ರರನ್ನೇ ನಾವು ಸೋಲಿಸಿಲ್ಲವೇ? ದಾವಣಗೆರೆ ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.ಬಿಜೆಪಿ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.
Key words: Confidence, win, by-election, CM, Siddaramaiah
The post ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





