ಮೈಸೂರು :ಮಾರ್ಚ್ -28: ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶಿಕ್ಷಣವು ಪೂರಕವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.
ಅವರು ಇಂದು ಮೈಸೂರಿನ ಐ ಬಿ ಸ್ ಸ್ಪೆಸ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ
ಪ್ರಜಾವಾಣಿ ಸಾಧಕಿಯರು 2026 ವತಿಯಿಂದ ಅವಳ ಸಾಧನೆ ಸಂಭ್ರಮ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ.ಇವೆರಡರ ಮಧ್ಯೆಯಿರುವ ಜೀವನದಲ್ಲಿ ಮನುಷ್ಯ ಸಮಾಜಮುಖಿಯಾಗಿ ಬದುಕಬೇಕಾಗಿರುವುದು ಮುಖ್ಯ. ಹುಟ್ಟಿದ ಮೇಲೆ ಸಾರ್ಥಕ ಜೀವನ ಮಾಡಬೇಕು. ಯಾವುದೇ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಅಗತ್ಯ ಮತ್ತು ಮುಖ್ಯ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ಹೇಳಿದರು.
ಬದುಕು ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿರಬೇಕು. ಶಿಕ್ಷಣ ಪಡೆದ ಅನೇಕರಿಗೆ ಇವೆರಡೂ ಇರುವುದಿಲ್ಲ. ಅಂಥವರು ಸಮಾಜಮುಖಿಯಾಗಿರಲು ಸಾಧ್ಯವಿಲ್ಲ. ಸಾಮಾಜಿಕ ವ್ಯವಸ್ಥೆಯಲ್ಲಿ ರಾಜಿ ಮಾಡಿಕೊಂಡು ಬದುಕುವುದನ್ನು ಬಹಳಷ್ಟು ಜನ ಮಾಡುತ್ತಾರೆ. ಅಸಮಾನತೆಯಿಂದ ಕೂಡಿರುವ ಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ. ಸಂವಿಧಾನ ಸಮಾಜದ ಅಸಮಾನತೆಯನ್ನು ತೊಡಗಿಸುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.
ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು.
ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು. ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯ ದೊರಕಿರುವುದು ಸಾರ್ಥಕವಾಗುವುದಿಲ್ಲ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎಂದರು.
ಜೀವನದಲ್ಲಿ ಏನಾದರೂ ಸಾಧಿಸಬೇಕು
ಎಲ್ಲರೂ ಜೀವನದಲ್ಲಿ ಏನಾದರೂ ಸಾಧಿಸಲು ಪ್ರಯತ್ನಿಸಬೇಕು. ಬದುಕಿನಲ್ಲಿ ಒಂದು ಗುರಿಯಿರಬೇಕು. ಅದನ್ನು ಸಾಧಿಸಲು ಛಲ, ಪ್ರಯತ್ನ ಅಗತ್ಯ ಎಂದರು. ಲಿಂಗತ್ವ ಅಲ್ಪಸಂಖ್ಯಾತರಾದ ಜಾನು, ಗೌಸಿಯಾ ಖಾನ್ ಮುಂತಾದವರು ಜೀವನವನ್ನು ಸಾರ್ಥಕಗೊಳಿಸಿದ್ದಾರೆ. ಜೀವನವನ್ನು ವ್ಯರ್ಥಗೊಳಿಸಲು ಬಿಡಬಾರದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಸಾಧಕರನ್ನು ಗುರುತಿಸುವುದು ಶ್ಲಾಘನೀಯ

ಎಲೆ ಮರೆ ಕಾಯಿಯಂತೆ ಇರುವ ಸಾಶಂಕರನ್ನು ಗುರುತಿಸುವ ಕೆಲಸವನ್ನು ಪ್ರಜಾವಾಣಿ ಮಾಡುತ್ತಿರುವುದು ಶ್ಲಾಘನೀಯ ಎಂದರು. ಪ್ರಶಸ್ತಿ ಪಡೆದ ಸಾಧಕರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಅಭಿನಂದಿಸಿದರು. ಪ್ರಶಸ್ತಿಗಳು ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚು ಮಾಡುತ್ತದೆ ಎಂದರು.
ಸಂಪಾದಕರಾದ ರವೀಂದ್ರ ಭಟ್, ರಾಣಿ ಪ್ರಮೋದಾ ದೇವಿ, ಅಕೈ ಪದ್ಮಶಾಲಿ ಸೇರಿ ಹಲವು ಪ್ರಮುಖರು ಮತ್ತು ಸಾಧಕಿಯರು ಉಪಸ್ಥಿತರಿದ್ದರು.
key words: Mysore, cm, prajavani, women day, felicitation, awards
The post ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





