31
March, 2026

A News 365Times Venture

31
Tuesday
March, 2026

A News 365Times Venture

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ

Date:

ಬೆಂಗಳೂರು,ಮಾರ್ಚ್,31,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಎರಡೂ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ.  ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಜನ ಹಿತ ಮರೆತು ಸಿಎಂ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಈಗಾಗಲೇ ಅವರಿಗೆ ಅಜೀರ್ಣ ಆಗುವಷ್ಟು ಮತವಿದೆ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದರೆ ಅಧಿಕಾರದ ಮದದಿಂದ ಇನ್ನೂ ಹೆಚ್ಚು ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ.  ಕಾಂಗ್ರೆಸ್ ನಾಯಕರಿಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಗಲಕೋಟೆಯಲ್ಲಿ ಬಿಜೆಪಿ ಪರ ಪ್ರಚಾರ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಯಾರೇ ಬಂದರೂ ಅವಕಾಶವಿದೆ. ಯತ್ನಾಳ್ ಬಂದರೆ ಸ್ವಾಗತಿಸುವೆ ಎಂದರು.

Key words: BJP, victory, by-elections, Former CM, BSY

The post ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜನಗಣತಿ–2027: ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ

ಮೈಸೂರು, ಮಾರ್ಚ್,31,2026 (www.justkannada.in): ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ...

கோவை தெற்கு: `50,000 வாக்கு வித்தியாசம் டார்கெட்; இது நம்முடைய மானப் பிரச்னை' – எஸ்.பி.வேலுமணி

கோவை தெற்கு சட்டமன்றத் தொகுதி அதிமுக வேட்பாளர் அம்மன் அர்ஜுனன் அறிமுக...

Indian Rupee: ఒకప్పుడు ఈ ముస్లిం దేశాలకు రూపాయే అధికారిక కరెన్సీ.. తర్వాత ఏం అయిందంటే!

Indian Rupee: భారత దేశ చరిత్రను పరిశీలిస్తే.. దేశ వైభవం ఏంటో...