ಬಾಗಲಕೋಟೆ,ಏಪ್ರಿಲ್,4,2026 (www.justkannada.in): ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ 1 ಲಕ್ಷ ಸರ್ಕಾರಿ ಹುದ್ದೆಗಳನ್ನ ಭರ್ತಿ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನ ಮರೆತು ನೇಮಕಾತಿಗಳನ್ನ ಆರಂಭಿಸದೇವಿಳಂಬ ಧೋರಣೆ ತಾಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಸಿಎಂ ಸಿದ್ದರಾಮಯ್ಯ ಅವರ ಸುಳ್ಳಗಳನ್ನ ಪುಸ್ತಕ ಸಿಡಿ ಮಾಡಬಹುದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ವರ್ಷದೊಳಗೆ ಒಂದು ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ ಭರವಸೆ ಕೊಟ್ಟರು ಅದಾದ ಬಳಿಕ 50 ಸಾವಿರ ಅಂದರು. ಅದರಲ್ಲೂ ಈಗ ಯಾವುದೇ ಸರ್ಕಾರಿ ಹುದ್ದೆಗಳನ್ನ ಭರ್ತಿ ಮಾಡಿಲ್ಲ ಎಂದು ಸರ್ಕಾರಕ್ಕೆ ತಿವಿದರು.
ಹಾಗೆಯೇ ರಾಜ್ಯದಲ್ಲಿ ಖಾಸಗಿ ಕಂಪನಿಗಳು ಪರ ರಾಜ್ಯಗಳ ಪಾಲಾಗುತ್ತಿವೆ. ಭ್ರಷ್ಟಾಚಾರ ಹೆಚ್ಚಾದ ಹಿನ್ನೆಲೆಯಲ್ಲಿ ಕಂಪನಿಗಳು ಬೇರೆ ರಾಜ್ಯಕ್ಕೆ ಹೋಗುತ್ತಿವೆ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಜನ ಕಾಂಗ್ರೆಸ್ ಅನ್ನು ಯಾವುದೇ ಕಾರಣಕ್ಕೂ ನಂಬಬಾರದು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಮತ ಹಾಕಿ ಎಂದು ಶ್ರೀರಾಮುಲು ಮನವಿ ಮಾಡಿದರು.
Key words: Sriramulu, government, forgetting, promise, fill, 1 lakh, government posts
The post 1 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ ಭರವಸೆ ಮರೆತ ಸರ್ಕಾರ-ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





