ಬೆಂಗಳೂರು,ಏಪ್ರಿಲ್,9,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠವು ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ 47 ಕೋಟಿ ರೂ. ಕಾಮಗಾರಿಗೆ ತಡೆಯಾಜ್ಞೆ ನೀಡಿದೆ. ಯಾವುದೇ ಕಾಮಗಾರಿ ಕೈಗೊಳ್ಳದಂತೆ ಡಿಸಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ. ಆದೇಶ ಉಲ್ಲಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಡಿಸಿಗೆ ನ್ಯಾಯಪೀಠವು ಎಚ್ಚರಿಕೆ ನೀಡಿದ್ದು, ಅಲ್ಲದೆ 47 ಕೋಟಿ ರೂ. ಅನುದಾನ ವೆಚ್ಚದ ಬಗ್ಗೆ ಲೆಕ್ಕಪತ್ರ ಒದಗಿಸಿ ಎಂದು ಸೂಚಿಸಿದೆ.
ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಚಾಮುಂಡಿ ಬೆಟ್ಟದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವಂತಹ ಕಾಮಗಾರಿ ನಡೆಸಲಾಗುತ್ತಿದೆ ಶಾಶ್ವತ ಕಾಮಗಾರಿ ನಡೆಸುವುದಿಲ್ಲವೆಂಬ ಮುಚ್ಚಳಿಕೆ ಉಲ್ಲಂಘಿಸಿದ್ದಾರೆ. ಹೀಗಾಗಿ ಕಾಮಗಾರಿಗಳಿಗೆ ತಡೆಯಾಜ್ಞೆ ನೀಡವಂತೆ ಮನವಿ ಮಾಡಿದ್ದರು.
Key words: High Court, stays, construction work, Chamundi Hills
The post ಚಾಮುಂಡಿ ಬೆಟ್ಟದಲ್ಲಿ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





